ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣ ಪಿ.ಯು ಕಾಲೇಜು: ಶೇ 99ರಷ್ಟು ಫಲಿತಾಂಶ

Published 17 ಏಪ್ರಿಲ್ 2024, 20:44 IST
Last Updated 17 ಏಪ್ರಿಲ್ 2024, 20:44 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದ ನಾರಾಯಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಶೇ 99ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 

200 ವಿದ್ಯಾರ್ಥಿಗಳು 570ಕ್ಕೂ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು 540ಕ್ಕೂ ಅಧಿಕ ಅಂಕ ಪಡೆದಿದ್ದಾರೆ. ಇನ್ನುಳಿದ ಶೇ 45 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆಯೊಂದಿಗೆ ತೇರ್ಗಡೆಯಾಗಿದ್ದಾರೆ. 

ವಿಜ್ಞಾನ ವಿಭಾಗದಲ್ಲಿ ವಜ್ರಕಾಂತ್ ಎಂ. (592), ಅರ್ಪಿತಾ ಆರ್. (591), ವೈ.ನಂದನಾ (591), ಲಿನಿಶಾ ಲೋಕೇಶ್ (590), ಸೌಮ್ಯ ಜಿ. (590) ಹಾಗೂ ಹನ್ಸಿಕಾ ಆರ್. (590) ಉತ್ತಮ ಸಾಧನೆ ಮಾಡಿದ್ದಾರೆ. 

ನಾರಾಯಣ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಪಿ. ಸಿಂಧುರ, ‘ಸಂಸ್ಥೆಯ ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಗಮನಾರ್ಹವಾದ ಸಾಧನೆ ಮಾಡಿದ್ದಾರೆ. ಇದು ಸಂಸ್ಥೆಯ ಶಿಕ್ಷಣದ ಗುಣಮಟ್ಟವನ್ನು ತೋರಿಸುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಿನಿಶಾ ಲೋಕೇಶ್
ಲಿನಿಶಾ ಲೋಕೇಶ್
ಸೌಮ್ಯ ಜಿ.
ಸೌಮ್ಯ ಜಿ.
ಅರ್ಪಿತಾ ಆರ್.
ಅರ್ಪಿತಾ ಆರ್.
ವೈ. ನಂದನಾ
ವೈ. ನಂದನಾ
ಹನ್ಸಿಕಾ ಆರ್.
ಹನ್ಸಿಕಾ ಆರ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT