ಗುರುವಾರ , ಫೆಬ್ರವರಿ 20, 2020
27 °C
ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ನಾರಾಯಣಗುರು ನಿಗಮ ಸ್ಥಾಪನೆಗೆ ಒಲವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಈಡಿಗ ಸಮಾಜದ 26 ಉಪಜಾತಿಗಳನ್ನು ಒಳಗೊಂಡಂತೆ ಸಮುದಾಯದ ಅಭಿವೃದ್ಧಿಗಾಗಿ ನಾರಾಯಣಗುರು ಅವರ ಹೆಸರಿನಲ್ಲಿ ನಿಗಮ ಸ್ಥಾಪಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬೇಡಿಕೆ ಸಲ್ಲಿಸಲಾಗಿದೆ. ಇದು ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ’ ಎಂದು ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ‘ನಾರಾಯಣಗುರು ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು. 

ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್‌, ‘ಸಮುದಾಯದ ಹೊಟ್ಟೆಪಾಡಿಗಾಗಿ ಮೀಸಲಾತಿ ಅವಶ್ಯಕತೆ ಇಲ್ಲ. ಸಮುದಾಯದ ಅಭಿವೃದ್ಧಿಗಾಗಿ ಅಗತ್ಯವಿದೆ. ಮುಸಲ್ಮಾನರಿಗೂ ನಮ್ಮ ಸಮುದಾಯದವರಿಗೂ ಯಾವುದೇ ವ್ಯತ್ಯಾಸವಿಲ್ಲ. ಎರಡೂ ಸಮುದಾಯದವರು ಶ್ರಮದಿಂದ ಕೆಲಸ ಮಾಡಿ ಜೀವನ ಕಟ್ಟಿಕೊಳ್ಳುತ್ತಾರೆ. ಸರ್ಕಾರಿ ಕೆಲಸ ಅರಸಿ ಹೋಗುವುದಿಲ್ಲ’ ಎಂದರು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ‘ಪರಿವರ್ತನಶ್ರೀ ರಾಜ್ಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಸಂಘದ ವತಿಯಿಂದ ‘ನಾರಾಯಣಗುರು ಕೋ ಆಪರೇಟಿವ್‌ ಸೊಸೈಟಿ’ಗೆ ಹಾಗೂ ಜಾತಿಗಣತಿಗೆ ಚಾಲನೆ ನೀಡಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು