ಬೆಂಗಳೂರು: ವಿಶ್ವ ಪಾರ್ಶ್ವವಾಯು ದಿನದ ಪ್ರಯುಕ್ತ ನಾರಾಯಣ ಹೆಲ್ತ್ ಪಾರ್ಶ್ವವಾಯು ಸಮಸ್ಯೆಗೆ ಸಂಬಂಧಿಸಿದಂತೆ ಉಚಿತ ತಪಾಸಣಾ ಶಿಬಿರವನ್ನು ಶುಕ್ರವಾರ ತನ್ನ ಕೇಂದ್ರಗಳಲ್ಲಿ ಹಮ್ಮಿಕೊಂಡಿದೆ.

ಪಾರ್ಶ್ವವಾಯು ಸಂಭವಿಸಿದಾಗ, ಮಿದುಳಿಗೆ ಅಗತ್ಯವಾದ ರಕ್ತ ಪೂರೈಕೆ ಸ್ಥಗಿತಗೊಳ್ಳುತ್ತದೆ. ಇದರಿಂದ ಮಿದುಳಿಗೆ ಹಾನಿಯಾಗಿ ಅಂಗವೈಕಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಇದರ ಮಾರಕ ಪರಿಣಾಮಗಳನ್ನು ತಪ್ಪಿಸಲು ಪ್ರಾರಂಭಿಕ ಹಂತದಲ್ಲಿಯೇ ಲಕ್ಷಣಗಳನ್ನು ಗುರುತಿಸಿ, ಚಿಕಿತ್ಸೆ ಒದಗಿಸಬೇಕಾಗುತ್ತದೆ. ಬೆಳಿಗ್ಗೆ 7ರಿಂದ ಸಂಜೆ 8 ಗಂಟೆಯವರೆಗೆ ನಡೆಯುವ ಶಿಬಿರದಲ್ಲಿ ತಜ್ಞ ವೈದ್ಯರು ಲಭ್ಯವಿರುತ್ತಾರೆ ಎಂದು ಆಸ್ಪತ್ರೆ ತಿಳಿಸಿದೆ.

ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ, ಲ್ಯಾಂಗ್ಫೋರ್ಡ್ ಟೌನ್ನ ನಾರಾಯಣ ಮೆಡಿಕಲ್ ಸೆಂಟರ್, ಎಚ್ಎಸ್ಆರ್. ಬಡಾವಣೆಯ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಯನಗರ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಎಚ್ಎಸ್ಆರ್ ಬಡಾವಣೆ ಹಾಗೂ ಹೊಸೂರಿನ ನಾರಾಯಣಮಲ್ಟಿಸ್ಪೆಷಾಲಿಟಿ ಕ್ಲಿನಿಕ್ಗಳಲ್ಲಿ ತಪಾಸಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.