ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಸ್‌ ನೂತನ ಕ್ಯಾಂಪಸ್‌ ಉದ್ಘಾಟಿಸಿದ ನರೇಂದ್ರ ಮೋದಿ

Last Updated 20 ಜೂನ್ 2022, 20:51 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಜ್ಞಾನಭಾರತಿ ಕ್ಯಾಂಪಸ್‌ ಆವರಣದಲ್ಲಿರುವ ಡಾ. ಬಿ.ಆರ್‌.ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ವಿಶ್ವವಿದ್ಯಾಲಯದ (ಬೇಸ್‌) ನೂತನ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು.

ಆ ಬಳಿಕ ಅವರು 22 ಅಡಿ ಎತ್ತರದ ಅಂಬೇಡ್ಕರ್‌ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ, ನಮನ ಸಲ್ಲಿಸಿದರು. ಬೇಸ್‌ ಕ್ಯಾಂಪಸ್‌ನ ಆಡಳಿತ ವಿಭಾಗದಲ್ಲಿ ₹250 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 13 ಬ್ಲಾಕ್‌ಗಳನ್ನೂ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಉನ್ನತಶಿಕ್ಷಣ ಸಚಿವ ಡಾ.ಸಿ.ಎನ್‌.
ಅಶ್ವತ್ಥನಾರಾಯಣ ಅವರು ಬೇಸ್‌ ಪರವಾಗಿ ಅಂಬೇಡ್ಕರ್‌ ಅವರ ಚಿಕ್ಕ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು.

ಅರ್ಥಶಾಸ್ತ್ರ ಮತ್ತು ಸಮಾಜ ವಿಜ್ಞಾನಗಳ ಉನ್ನತಾಧ್ಯಯನಕ್ಕೆ ಮೀಸ ಲಾಗಿರುವ ಬೇಸ್‌ ವಿ.ವಿಯಲ್ಲಿ ಇನ್ನು ಮೂರು ವರ್ಷಗಳಲ್ಲಿ 1,100 ವಿದ್ಯಾರ್ಥಿ ಗಳಿಗೆ ಪ್ರವೇಶಾವಕಾಶ ಸಿಗಲಿದೆ. ಬೇಸ್‌ ಕ್ಯಾಂಪಸ್‌ 43.35 ಎಕರೆ ಪ್ರದೇಶದಲ್ಲಿದ್ದು, ಕ್ಯಾಂಪಸ್‌ ಕಟ್ಟಡ ನಿರ್ಮಾಣಕ್ಕಾಗಿ ಮೊದಲ ಹಂತದಲ್ಲಿ ರಾಜ್ಯ ಸರ್ಕಾರ ₹201 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಬೇಸ್ ಐದು ವರ್ಷಗಳ ಇಂಟಿ ಗ್ರೇಟೆಡ್‌ ಎಕನಾಮಿಕ್ಸ್‌ ಕೋರ್ಸ್‌ ಹೊಂದಿದೆ.

ಅತಿ ಶೀಘ್ರವಾಗಿ ಇಲ್ಲಿ ಸಂಶೋಧನಾ ವಿಭಾಗವೂ ಆರಂಭಗೊಳ್ಳಲಿದೆ. ಇಲ್ಲಿ ಪ್ರವೇಶ ಪಡೆಯಲು ಅಖಿಲ ಭಾರತ ಮಟ್ಟದ ಕಾಮನ್‌ ಯೂನಿವರ್ಸಿಟಿ ಎಂಟ್ರೆನ್ಸ್‌ ಟೆಸ್ಟ್‌ (ಸಿಯುಇಟಿ) ಅನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ ಪ್ರವೇಶ ಪರೀಕ್ಷೆ ನಡೆಸಲಿದೆ. 60:40 ಅನುಪಾತದಲ್ಲಿ ರಾಜ್ಯ ಮತ್ತು ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ನಡೆಯಲಿದೆ.

ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಗಳಿದ ವರ್ಗ ಹಾಗೂ ಹೈದರಾಬಾದ್‌ ಕರ್ನಾಟಕದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಮೀಸಲಾತಿ ನೀಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT