ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್‌ ಯುದ್ಧ ವಿಮಾನ ದೇಶದ ಹೆಮ್ಮೆ: ವೆಂಕಯ್ಯ ನಾಯ್ಡು

Last Updated 20 ಆಗಸ್ಟ್ 2021, 19:33 IST
ಅಕ್ಷರ ಗಾತ್ರ

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಎಚ್‌ಎಎಲ್‌ಗೆ ಶುಕ್ರವಾರ ಭೇಟಿ ನೀಡಿ ವೈಮಾನಿಕ ಮತ್ತು ರಕ್ಷಣಾ ಸೌಲಭ್ಯಗಳನ್ನು ವೀಕ್ಷಿಸಿ, ಬಳಿಕ ‘ತೇಜಸ್‌’ ಯುದ್ಧ ವಿಮಾನದ ಕಾಕ್‌ಪಿಟ್‌ನಲ್ಲಿ ಕುಳಿತು ಅದರ ಮಾಹಿತಿ ಪಡೆದರು.

ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇಲ್ಲಿನ ವೈಮಾನಿಕ ಮತ್ತು ರಕ್ಷಣಾ ವ್ಯವಸ್ಥೆಯ ಮೂಲಸೌಕರ್ಯಗಳನ್ನು ನೋಡಿದ ಬಳಿಕ ದೇಶದ ಸುರಕ್ಷತೆ ಮತ್ತು ಭದ್ರತೆಯ ಖಾತರಿಯಾಗಿದೆ ಎಂದರು.

’ಎಚ್‌ಎಎಲ್‌ನ ಹಲವು ಯೋಜನೆಗಳು ಖಾಸಗಿ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ದೇಶಿಯವಾಗಿ ಅತ್ಯಾಧುನಿಕ ಜಾಗತಿಕ ಮಟ್ಟದ ತಂತ್ರಜ್ಞಾನ ಅಭಿವೃದ್ಧಿ ಆಗುತ್ತದೆ ಎಂಬ ವಿಶ್ವಾಸವಿದೆ. ಇದರಿಂದ ನಮ್ಮ ದೇಶದ ಸೇನಾ ವ್ಯವಸ್ಥೆಗೆ ಹೆಚ್ಚಿನ ಬಲ ಬರುತ್ತದೆ’ ಎಂದು ವೆಂಕಯ್ಯನಾಯ್ಡು ಹೇಳಿದರು.

ಎಚ್‌ಎಎಲ್‌ ಜಾಗತಿಕ ಮಟ್ಟದ ನಾಯಕನಾಗಿ ಬೆಳೆದಿದೆ. ವೈಮಾನಿಕ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಬೇಕು ಎಂಬ ಭಾರತದ ಕನಸು ನನಸಾಗುವಲ್ಲಿ ಎಚ್‌ಎಎಲ್‌ ಪ್ರಧಾನ ಪಾತ್ರವಹಿಸಲಿದೆ. ಕಳೆದ 80 ವರ್ಷಗಳಲ್ಲಿ ಸಂಸ್ಥೆಯ ಪಾತ್ರ ಮಹತ್ವವಾದುದು. ದೇಶೀಯವಾಗಿ ತಯಾರಿಸಿರುವ ತೇಜಸ್ ಯುದ್ಧ ವಿಮಾನ ನಮ್ಮೆಲ್ಲರ ಹೆಮ್ಮೆ ಎಂದರು.

ರಾಜ್ಯಪಾಲ ಥಾವರ್ ಚಂದ್‌ ಗೆಹಲೋತ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT