ಬೆಂಗಳೂರು: ‘ಸ್ತ್ರೀ ಶೌಚಾಲಯ’ ಮತ್ತು ‘ಮೊಬೈಲ್ ಫೀವರ್ ಕ್ಲಿನಿಕ್’ ಅಭಿವೃದ್ಧಿಪಡಿಸಿರುವ ಕೆಎಸ್‌ಆರ್‌ಟಿಸಿಗೆ ’ಸಮಾಜದ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿ ವರ್ಗ‘ದಲ್ಲಿರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.

ಬುಧವಾರ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಘೋಷಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ‘ಕೊವಿಡ್ ಪರಿಸ್ಥಿತಿಯಲ್ಲೂ ನಮ್ಮ ಸಿಬ್ಬಂದಿ ಕೊರೊನಾ ಯೋಧರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಪ್ರಶಸ್ತಿಯನ್ನು ನಮ್ಮ ಸಿಬ್ಬಂದಿಗೆ, ಅದರಲ್ಲೂ ಕೋವಿಡ್‌ಗೆ ಬಲಿಯಾದವರಿಗೆ ಅರ್ಪಿಸುತ್ತೇನೆ’ ಎಂದರು.

‘ನಿಗಮ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಇದೆ. ಆದರೂ ಕರ್ತವ್ಯದಿಂದ ವಿಮುಖರಾಗದೆ ಎಂದಿನಂತೆ ಶ್ರದ್ಧೆ ಮತ್ತು ಶ್ರಮ ವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದರ ಫಲವಾಗಿ ಈ ಪ್ರಶಸ್ತಿ ಬಂದಿದೆ. ಪ್ರಶಸ್ತಿ ಮತ್ತು ಪುರಸ್ಕಾರಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಲಿವೆ’ ಎಂದು ಹೇಳಿದರು.

‘ನಿಗಮದ ಅನುಪಯುಕ್ತ ಬಸ್‌ಗಳನ್ನು ಉಪಯೋಗಿಸಿಕೊಂಡು ಸ್ತೀ ಶೌಚಾಲಯ ಮತ್ತು ಫೀವರ್ ಕ್ಲಿನಿಕ್ ನಿರ್ಮಿಸಲಾಗಿದೆ. ಈ ಪ್ರಯತ್ನಕ್ಕೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ದೊರಕಿರುವುದು ಸಂತಸದ ಸಂಗತಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.