ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ ರಾಷ್ಟ್ರೀಯ ಪ್ರಶಸ್ತಿ

Published 24 ಸೆಪ್ಟೆಂಬರ್ 2023, 15:40 IST
Last Updated 24 ಸೆಪ್ಟೆಂಬರ್ 2023, 15:40 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಕಾರ್ಪೊರೇಟ್‌ ಕೊಲ್ಯಾಟರಲ್‌ (Corporate Collateral) ರಾಷ್ಟ್ರೀಯ ಪ್ರಶಸ್ತಿಗಳ 9 ವಿಭಾಗಗಳಲ್ಲಿ ಕೆಎಸ್‌ಆರ್‌ಟಿಸಿ, 4 ವಿಭಾಗಗಳಲ್ಲಿ ಬಿಎಂಟಿಸಿ ಆಯ್ಕೆಯಾಗಿದ್ದು, ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಕೆಎಸ್‌ಆರ್‌ಟಿಸಿ ವರ್ಷದ ಅತ್ಯುತ್ತಮ ಗ್ರಾಹಕ ಸ್ನೇಹಿ ಸಂಸ್ಥೆ, ಅತ್ಯುತ್ತಮ ವರ್ಷದ ಸೇವಾ ಉಪಕ್ರಮ, ಸಾಂಸ್ಥಿಕ ಹಾಗೂ ವ್ಯಾವಹಾರಿಕ ಸಂಪರ್ಕ ಉಪಕ್ರಮ ವಿಭಾಗಗಳಲ್ಲಿ ಡೈಮಂಡ್‌ ಪ್ರಶಸ್ತಿ, ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ, ವಿವಿಧತೆ ಹಾಗೂ ಸಮಾನತೆಯ ಉತ್ತಮ ಉಪಕ್ರಮ, ಅತ್ಯುತ್ತಮ ವರ್ಷದ ಉಪಕ್ರಮ ಉತ್ಪನ್ನಗಳಲ್ಲಿ ಬೆಳ್ಳಿ ಪ್ರಶಸ್ತಿ, ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ, ಸಾರ್ವಜನಿಕ ಸಂಪರ್ಕ ಅಧ್ಯಯನಗಳಿಗೆ ಕಂಚಿನ ಪ್ರಶಸ್ತಿ ಹಾಗೂ ಪ್ರಾದೇಶಿಕ ಆಂತರಿಕ ನಿಯತಕಾಲಿಕ ಮುದ್ರಣಕ್ಕೆ ಸಮಾಧಾನಕರ ಪ್ರಶಸ್ತಿ ಪಡೆಯಿತು.

ಬಿಎಂಟಿಸಿ ಸಾಂಸ್ಥಿಕ ಕೈಪಿಡಿಗೆ ಡೈಮಂಡ್‌ ಪ್ರಶಸ್ತಿ, ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆಗೆ ಚಿನ್ನದ ಪ್ರಶಸ್ತಿ, ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕೆ ಬೆಳ್ಳಿ ಪ್ರಶಸ್ತಿ, ವರ್ಷದ ಅತ್ಯುತ್ತಮ ಸೃಜನಶೀಲ ಜಾಹೀರಾತು ವಿಭಾಗದಲ್ಲಿ ಕಂಚಿನ ಪ್ರಶಸ್ತಿ ಪಡೆಯಿತು.

ಕೆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ಹಿಮವರ್ಧನ ನಾಯ್ಡು ಅಲೂರಿ, ಕೋಲಾರ ವಿಭಾಗದ ವಿ. ಬಸವರಾಜು, ಬೆಂಗಳೂರು ಕೇಂದ್ರೀಯ ವಿಭಾಗದ ಎಸ್. ಲಕ್ಷ್ಮಣ್, ಮಂಡ್ಯ ವಿಭಾಗದ ಎಸ್.ಪಿ. ನಾಗರಾಜ, ಬಿಎಂಟಿಸಿ ಪಶ್ಚಿಮ ವಲಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್‌ ಎನ್‌. ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT