ಬೆಂಗಳೂರು: ಅತ್ಯುತ್ತಮ ಪ್ರಯಾಣಿಕ ಸೇವೆಗಾಗಿ ‘ನಮ್ಮ ಮೆಟ್ರೊ’ಗೆ ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ ಲಭಿಸಿದೆ.
ಕೇರಳದ ಕೊಚ್ಚಿಯಲ್ಲಿ ನಡೆದ 15ನೇ ಅರ್ಬನ್ ಮೊಬಿಲಿಟಿ ಇಂಡಿಯಾ ಕಾನ್ಫರೆನ್ಸ್‌ನಲ್ಲಿ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.