ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಫೆ.15ರಿಂದ ಎನ್‌ಎಚ್‌ಎಂ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

Published 10 ಫೆಬ್ರುವರಿ 2024, 15:35 IST
Last Updated 10 ಫೆಬ್ರುವರಿ 2024, 15:35 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕಾಯಂಗೊಳಿಸಬೇಕು ಎಂಬ ಬೇಡಿಕೆಯು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 15ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್‌ಎಚ್‌ಎಂ ಗುತ್ತಿಗೆ ನೌಕರರ ಸಂಘ ತಿಳಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಮಿತ ಗಾಯಕವಾಡ್, ‘ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಇತರೆ ನೌಕರರಿಗೆ ನೀಡಿದಂತೆ ಶೇ 15ರಷ್ಟು ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳಿಗೂ ನೀಡಬೇಕು. ತಡೆಹಿಡಿದ ಶೇ 5ರಷ್ಟು ವಾರ್ಷಿಕ ವೇತನ, ಶೇ 10ರಷ್ಟು ಬೋನಸ್‌ ಕೂಡಲೇ ಪಾವತಿಸಬೇಕು’ ಎಂದು ಆಗ್ರಹಿಸಿದರು.

‘ವಿನಾಕಾರಣ ವಜಾಗೊಳಿಸಿದ ಎಲ್ಲ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಮಾಸಿಕ ₹15 ಸಾವಿರ ಪ್ರೋತ್ಸಾಹ ಧನ ನೀಡಬೇಕು. ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು. ಆರೋಗ್ಯ, ಕ್ಷೇಮ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಸ್ವಚ್ಛತಾ ಸೇವೆ ಇತರೆ ಔಷಧಗಳನ್ನು ಕಡ್ಡಾಯವಾಗಿ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಚನ್ನಪ್ಪ ನಾಯ್ಕ ಬಣಕಾರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT