ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಶಾಲೆಯಲ್ಲಿ ಕನ್ನಡಿಗರಿಗೂ ಸೀಟುಗಳು

Last Updated 7 ಮಾರ್ಚ್ 2022, 20:44 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯ ಮೂರು ವರ್ಷಗಳ ಎಲ್‌ಎಲ್‌ಬಿ ಕೋರ್ಸ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹೊರತುಪಡಿಸಿದ ಮೀಸಲುಪಟ್ಟಿಯಲ್ಲಿರುವ ಜಾತಿಗಳ ರಾಜ್ಯ ಅಭ್ಯರ್ಥಿಗಳಿಗೆ ಶೇ 25ರಷ್ಟು ಸೀಟುಗಳನ್ನು ಮೀಸಲಿರಿಸಲಾಗಿದೆ.

2022–23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 60 ಅಭ್ಯರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ರಾಷ್ಟ್ರಮಟ್ಟದ ಲಿಖಿತ ಪರೀಕ್ಷೆ (ಎನ್‌ಎಲ್‌ಎಸ್‌ಎಟಿ) ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಲಿಖಿತ ಪರೀಕ್ಷೆಗೆ 140 ಅಂಕಗಳನ್ನು ನಿಗದಿಪಡಿಸಲಾಗಿದ್ದು, 150 ನಿಮಿಷದ ಅವಧಿಯದ್ದಾಗಿದೆ. ಸಂದರ್ಶನಕ್ಕೆ 10 ಅಂಕಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್‌ 26 ಕೊನೆಯ ದಿನವಾಗಿದ್ದು, ಲಿಖಿತ ಪರೀಕ್ಷೆಯು ಏಪ್ರಿಲ್‌ 22ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಸಂದರ್ಶನವು ಮೇ ತಿಂಗಳಲ್ಲಿ ನಡೆಯಲಿದೆ. ಪ್ರವೇಶಾತಿಯ ಅಂತಿಮ ಪಟ್ಟಿಯನ್ನು ಜೂನ್‌ ತಿಂಗಳ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು. ಜುಲೈ 1ರಿಂದ ತರಗತಿಗಳು ಆರಂಭವಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ವರ್ಗದವರು ಪದವಿಯಲ್ಲಿ ಶೇ45ಕ್ಕಿಂತ ಕಡಿಮೆ ಅಂಕ ಪಡೆದಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಶೇ40ಕ್ಕಿಂತ ಕಡಿಮೆ ಪಡೆದಿರಬಾರದು.

ಲಿಖಿತ ಪರೀಕ್ಷೆ ಮತ್ತು ಮೀಸಲಾತಿಯ ವಿವರಗಳಿಗೆ https://www.nls.ac.in/programme/3-year-llb-hons/ ವೆಬ್‌ಸೈಟ್‌ ವೀಕ್ಷಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT