ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ರೋಲರ್‌ ಸ್ಕೇಟಿಂಗ್‌: ಸೂರಜ್‌ ಸ್ವೈನ್‌ ಚಾಂಪಿಯನ್‌

Published 11 ಜನವರಿ 2024, 21:18 IST
Last Updated 11 ಜನವರಿ 2024, 21:18 IST
ಅಕ್ಷರ ಗಾತ್ರ

ಯಲಹಂಕ: ಭಾರತೀಯ ರೋಲರ್‌ ಸ್ಕೇಟಿಂಗ್‌ ಸಂಸ್ಥೆಯ ವತಿಯಿಂದ ಚೆನ್ನೈನಲ್ಲಿ ಇತ್ತೀಚೆಗೆ ನಡೆದ 61ನೇ ರಾಷ್ಟ್ರೀಯ ರೋಲರ್‌ ಸ್ಕೇಟಿಂಗ್‌ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಯಲಹಂಕದ ನಾರಾಯಣ ಇ–ಟೆಕ್ನೊ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸೂರಜ್‌ ಸ್ವೈನ್‌ ಚಾಂಪಿಯಾನ್‌ ಆಗಿ ಹೊರಹೊಮ್ಮಿದ್ದಾನೆ.

ಯಲಹಂಕದ ಶರತ್ ಸ್ವೈನ್ ಮತ್ತು ನಮಿತಾ ಸ್ವೈನ್‌ ದಂಪತಿಯ ಮಗ ಸೂರಜ್‌ ಬೃಂದಾವನ ಸ್ಕೇಟಿಂಗ್‌ ಸಂಸ್ಥೆಯ ತರಬೇತುದಾರರಾದ ನಾಗೇಶ್‌ ಸಿ.ಎಂ. ಮತ್ತು ಮಧುಚಂದ್ರ ತರಬೇತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಮತ್ತು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಕೇಟಿಂಗ್‌ ಚಾಂಪಿಯನ್‌ಶಿಪ್‌ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಪಡೆಯುವ ಮೂಲಕ 2021ರಲ್ಲಿ ರಾಷ್ಟ್ರಮಟ್ಟದ ಸ್ಕೇಟಿಂಗ್‌ ಸ್ಪರ್ಧೆಗೆ ಆಯ್ಕೆಯಾಗಿದ್ದ.

2021–22ರಲ್ಲಿ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಕೇಟಿಂಗ್‌ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲೂ ಚಿನ್ನದ ಪದಕ ಪಡೆದಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT