ಬೆಂಗಳೂರು: ‘ವಿಜ್ಞಾನ ಕ್ಯಾಂಪಸ್ ಎಂದೇ ಹೆಸರಾಗಿದ್ದ ಸೆಂಟ್ರಲ್ ಕಾಲೇಜಿನ ಶೈಕ್ಷಣಿಕ ಪರಂಪರೆ ಮುಂದುವರಿಸಲು ವಿಜ್ಞಾನ ವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ವಿಶೇಷ ಉತ್ತೇಜನ ನೀಡಲಾಗುವುದು’ ಎಂದು ಡಾ. ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ರಮೇಶ್ ಭರವಸೆ ನೀಡಿದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಮೂಲ ವಿಜ್ಞಾನ ವಿಷಯಗಳ ಕಲಿಕೆಯ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂದು ವಿವರಿಸಿದರು.

ದೇಶದ ಸರ್ವತೋಮುಖ ಪ್ರಗತಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ ಮತ್ತು ಅನ್ವೇಷಣೆಗಳ ಪಾತ್ರ ಮಹತ್ವದ್ದಾಗಿದ್ದು, ಜನರ ಜೀವನ ಗುಣಮಟ್ಟ ಸುಧಾರಣೆಗೆ ಮೂಲಾಧಾರವಾಗಿದೆ ಎಂದು ಪ್ರತಿಪಾದಿಸಿದರು.

‘ಸಮಾಜದ ಕೆಳಸ್ತರಗಳ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಆಳವಾಗಿ ಬೇರೂರಿರುವ ಮೌಢ್ಯವನ್ನು ನಿವಾರಿಸಿ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಕಾರ್ಯೋನ್ಮುಖವಾಗಬೇಕು’ ಎಂದು ಅವರು ಅಭಿಪ್ರಾಯಪಟ್ಟರು.

ಎಸಿಎಸ್ಐಆರ್ ಪ್ರಾಧ್ಯಾಪಕಿ ಶ್ರೀದೇವಿ ಜಾಡೇ ಮಾತನಾಡಿ, ‘ಸಾಮಾಜಿಕ ಮತ್ತು ಕೌಟುಂಬಿಕ ಕಾರಣಗಳಿಂದಾಗಿ ಉನ್ನತ ಶಿಕ್ಷಣದ ಹಂತದಲ್ಲಿ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ತೊರೆಯುವ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಬೇಕು. ಹೆಣ್ಣು ಮಕ್ಕಳು ವಿಜ್ಞಾನ ವಿಷಯಗಳ ಅಧ್ಯಯನದತ್ತ ವಿಶೇಷ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಿಶ್ವವಿದ್ಯಾಲಯದ ವಿಜ್ಞಾನ ನಿಕಾಯದ ಡೀನ್ ಪ್ರೊ. ಪಿ.ಆರ್. ಚೇತನ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ (ಮೌಲ್ಯಮಾಪನ) ಪ್ರೊ. ರಮೇಶ ಬಿ.ಕುಡೇನಟ್ಟಿ, ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮಿ ಹಾಜರಿದ್ದರು.

ವಿಜ್ಞಾನ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಭಿತ್ತಿಚಿತ್ರ ರಚನೆ, ಚರ್ಚಾ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.