ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಇಎಸ್‌ಐ, ಭದ್ರಾವತಿಯ ತಾಲ್ಲೂಕು ಆಸ್ಪತ್ರೆಗೆ ರಾಷ್ಟ್ರೀಯ ಲಕ್ಷ್ಯ ಪ್ರಶಸ್ತಿ

Published 20 ಜೂನ್ 2023, 5:49 IST
Last Updated 20 ಜೂನ್ 2023, 5:49 IST
ಅಕ್ಷರ ಗಾತ್ರ

ಬೆಂಗಳೂರು: ಹೆರಿಗೆ ವಿಭಾಗ ಮತ್ತು ಹೆರಿಗೆ ಶಸ್ತ್ರಚಿಕಿತ್ಸಾ ವಿಭಾಗಗಳ ಆರೈಕೆಯಲ್ಲಿ ಗುಣಮಟ್ಟದ ಆರೈಕೆ ನೀಡಿರುವ ಬೆಂಗಳೂರಿನ ಇಎಸ್ಐ ಆಸ್ಪತ್ರೆ (ಇಎಸ್‌ಐಸಿ ಎಂಸಿ ಆ್ಯಂಡ್‌ ಪಿಐಎಂಎಸ್‌ಆರ್‌) ಮತ್ತು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡುವ ರಾಷ್ಟ್ರೀಯ ‘ಲಕ್ಷ್ಯ’ ಪ್ರಶಸ್ತಿ ಲಭಿಸಿದೆ.

ಬೆಂಗಳೂರು ಇಎಸ್‌ಐ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗದಲ್ಲಿ ಶೇ 96 ಮತ್ತು ಹೆರಿಗೆ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಶೇ 96 ಸಾಧನೆ ಹಾಗೂ ಭದ್ರಾವತಿ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗದಲ್ಲಿ ಶೇ 94 ಮತ್ತು ಹೆರಿಗೆ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಶೇ 95 ಸಾಧನೆ ಆಗಿರುವುದರಿಂದ ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಪ್ಲಾಟಿನಂ ಪ್ರಶಸ್ತಿ ನೀಡಲಾಗಿದೆ. 

‘ಈ ಪ್ರಶಸ್ತಿಯಿಂದಾಗಿ ನಮ್ಮ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ. ಇದೆಲ್ಲ ನಮಗೆ ಸಂತಸ ಉಂಟು ಮಾಡಿದೆ. ನಮ್ಮೆಲ್ಲ ವೈದ್ಯರು, ಸಿಬ್ಬಂದಿ, ಇಲಾಖೆಯ ಅಧಿಕಾರಿಗಳ ಸಹಕಾರ ಇದಕ್ಕೆ ಕಾರಣ’ ಎಂದು ಭದ್ರಾವತಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್‌ ಡಿ.ಎಸ್‌. ಪ್ರತಿಕ್ರಿಯಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT