ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೀಣ್ಯ ದಾಸರಹಳ್ಳಿ: ರಾಷ್ಟ್ರಿಯ ಯುವ ದಿನ ಮತ್ತು ವಿವೇಕಾನಂದ ಜಯಂತಿ

Published 12 ಜನವರಿ 2024, 21:03 IST
Last Updated 12 ಜನವರಿ 2024, 21:03 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ನಮ್ಮ ದೇಶವನ್ನು ಸದೃಢವಾಗಿ ಕಟ್ಟಬೇಕಾದ ಯುವಕರು ಬಲಿಷ್ಠರಾಗಬೇಕಿದೆ. ಆದರ್ಶದ ದಾರಿಯಲ್ಲಿ ಯುವ ಸಮೂಹ ಸಾಗಬೇಕು’ ಎಂದು ಸಾಹಿತಿ ಚಿಕ್ಕಹೆಜ್ಜಾಜಿ ಮಹಾದೇವ್ ತಿಳಿಸಿದರು.

ಬಿಜೆಪಿ ಯುವ ಮೋರ್ಚಾ ವತಿಯಿಂದ ಚಿಕ್ಕಸಂದ್ರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನ ಹಾಗೂ ವಿವೇಕಾನಂದರ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು.

ಯುವಶಕ್ತಿ ಮಾದಕ ವ್ಯಸನಗಳಿಗೆ ಬಲಿಯಾಗದೆ ವಿವೇಕಾನಂದರ ಆದರ್ಶ ಮತ್ತು ದೇಶಪ್ರೇಮವನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದರು.

ಶಾಸಕ ಎಸ್. ಮುನಿರಾಜು ಮಾತನಾಡಿ, ‘ವಿವೇಕಾನಂದರು 39 ವರ್ಷಗಳ ಕಾಲ ಬದುಕಿ ಇಡೀ ವಿಶ್ವಕ್ಕೆ ಉನ್ನತವಾದ ಸಂದೇಶಗಳನ್ನು ಸಾರಿದ್ದಾರೆ’ ಎಂದು ನೆನಪು ಮಾಡಿಕೊಂಡರು.

ಜಿ. ಮರಿಸ್ವಾಮಿ, ದಾಸರಹಳ್ಳಿ ಮಂಡಲ ಅಧ್ಯಕ್ಷ ಸೋಮಶೇಖರ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಭರತ್ ಸೌಂದರ್ಯ, ವಿಜಯ್ ಕುಮಾರ್, ಬಿಜೆಪಿ ಮುಖಂಡರಾದ ಪಿ.ಎಚ್. ರಾಜು, ಗುರುಪ್ರಸಾದ್, ಭಾಗ್ಯಮ್ಮ, ಸಾಹಿತಿ ವೈ.ಬಿ.ಎಚ್. ಜಯದೇವ್, ಎಂ.ಎಚ್. ಪಾಟೀಲ್, ವಿನೋದ್ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT