ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಂಡಹಳ್ಳಿ: ರೈಲು ತಾತ್ಕಾಲಿಕ ನಿಲುಗಡೆ ಮುಂದುವರಿಕೆ

Published 20 ಮಾರ್ಚ್ 2024, 14:30 IST
Last Updated 20 ಮಾರ್ಚ್ 2024, 14:30 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಮತ್ತು ಮೈಸೂರು ನಿಲ್ದಾಣಗಳ ನಡುವೆ ಸಂಚರಿಸುವ ಮೆಮು ವಿಶೇಷ ರೈಲುಗಳನ್ನು ನಾಯಂಡಹಳ್ಳಿಯಲ್ಲಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆಯನ್ನು ಆರು ತಿಂಗಳು ಮುಂದುವರಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಈ ತಾತ್ಕಾಲಿಕ ನಿಲುಗಡೆ ವ್ಯವಸ್ಥೆ ಮಾರ್ಚ್‌ 21ರಿಂದ ಸೆಪ್ಟೆಂಬರ್‌ 20ರವರೆಗೆ ಮುಂದುವರಿಯಲಿದೆ.

ಸಂಚಾರ ಅವಧಿ ವಿಸ್ತರಣೆ: ಬೆಳಗಾವಿ-ಭದ್ರಾಚಲಂ ರೋಡ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು ಮಾ.30ರಿಂದ ಏಪ್ರಿಲ್‌ 30ರವರೆಗೆ, ಭದ್ರಾಚಲಂ ರೋಡ್-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಏಪ್ರಿಲ್ 30ರಿಂದ ಮೇ 1ರವರೆಗೆ ವಿಸ್ತರಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT