ಗುರುವಾರ , ಜುಲೈ 7, 2022
20 °C

ಬೆಂಗಳೂರು: ವಿದೇಶದಿಂದ ಗಾಂಜಾ ತರಿಸಿ ಮಾರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೊರ ದೇಶದಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಎನ್‌ಸಿಬಿ (ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ) ಅಧಿಕಾರಿಗಳು ಭೇದಿಸಿದ್ದು, ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ್ದಾರೆ.

‘2021ರಲ್ಲಿ ಗ್ರೀಕ್‌ನಿಂದ ತರಿಸಲಾಗಿದ್ದ 1 ಕೆ.ಜಿ ಗಾಂಜಾವನ್ನು ಜಪ್ತಿ ಮಾಡಿ, ಆರೋಪಿಯೊಬ್ಬನನ್ನು ಬಂಧಿಸಲಾಗಿತ್ತು. ಅದೇ ಜಾಲದಲ್ಲಿ ಸಕ್ರಿಯವಾಗಿದ್ದ ನೈಜೀರಿಯಾದ ಇಬ್ಬರು ಪ್ರಜೆಗಳನ್ನು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ. ಅಮೆರಿಕದಿಂದ ತರಿಸಿದ್ದ 1 ಕೆ.ಜಿ 420 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಎನ್‌ಸಿಬಿ ಮೂಲಗಳು ಹೇಳಿವೆ.

‘ಉತ್ತಮ ದರ್ಜೆಯ ಗಾಂಜಾಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇದ್ದು, ಬೆಲೆಯೂ ಹೆಚ್ಚಿದೆ. ಇಂಥ ಗಾಂಜಾವನ್ನು ಆರೋಪಿಗಳು, ಡಾರ್ಕ್‌ನೆಟ್‌ ಜಾಲತಾಣಗಳಲ್ಲಿ ಖರೀದಿಸುತ್ತಿದ್ದರು. ನಂತರ ಕೋರಿಯರ್ ಮೂಲಕ ಬೆಂಗಳೂರು ಹಾಗೂ ಹೈದರಾಬಾದ್‌ಗೆ ತರಿಸಿಕೊಳ್ಳುತ್ತಿದ್ದರು. ಕೆಲ ಉದ್ಯಮಿಗಳು ಹಾಗೂ ಕೆಲ ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದರು.’

‘ಅಮೆರಿಕದಿಂದ ಹೈದರಾಬಾದ್‌ಗೆ ಇತ್ತೀಚೆಗೆ ಬಂದಿದ್ದ ಕೋರಿಯರ್‌ನಲ್ಲಿ ಗಾಂಜಾ ಇರುವ ಮಾಹಿತಿ ಲಭ್ಯವಾಗಿತ್ತು. ಕೋರಿಯರ್ ತಪಾಸಣೆ ನಡೆಸಿದಾಗ, ಗಾಂಜಾ ಪತ್ತೆಯಾಯಿತು. ಅದರ ಮೇಲಿನ ವಿಳಾಸ ಆಧರಿಸಿ ತನಿಖೆ ಮುಂದುವರಿಸಿದಾಗ, ಆರೋಪಿಗಳು ಸಿಕ್ಕಿಬಿದ್ದರು’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು