ಗುರುವಾರ , ಜನವರಿ 21, 2021
21 °C

ಮಕ್ಕಳ ಬ್ಯಾಗ್‌ನಲ್ಲಿ ಡ್ರಗ್ಸ್; ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಕ್ಕಳ ಬ್ಯಾಗ್‌ನಲ್ಲಿ ಡ್ರಗ್ಸ್ ಬಚ್ಚಿಟ್ಟು ಸಾಗಣೆ ಮಾಡಿದ್ದ ಆರೋಪದಡಿ ನಾಲ್ವರನ್ನು ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ದಳದ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

‘ನಗರದ ನಿವಾಸಿ ಡಿ. ಶುಕ್ಲಾ, ಜಿ. ಮರಿಯಾ, ನೈಜೀರಿಯಾದ ಬಿ. ಒನೊವೊ ಹಾಗೂ ಸಿ. ಒಕ್ವೊರ್ ಬಂಧಿತರು. ಇವರಿಂದ ₹ 20 ಲಕ್ಷ ಮೌಲ್ಯದ 4 ಕೆ.ಜಿ 870 ಗ್ರಾಂ ಡ್ರಗ್ಸ್ ಜಪ್ತಿ ಮಾಡಲಾಗಿದೆ’ ಎಂದು ಎನ್‌ಸಿಬಿ ಅಧಿಕಾರಿಯೊಬ್ಬರು ಹೇಳಿದರು.

‘ಅಮೃತಹಳ್ಳಿ ಪ್ರದೇಶದ ಮನೆಯೊಂದಕ್ಕೆ ಬಂದಿದ್ದ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇರುವ ಮಾಹಿತಿ ಲಭ್ಯವಾಗಿತ್ತು. ಅದರಂತೆ ಕಾರ್ಯಾಚರಣೆ ಮಾಡಿ ಎರಡು ಪಾರ್ಸೆಲ್‌ಗಳನ್ನು  ಪತ್ತೆ ಮಾಡಲಾಯಿತು. ಪಾರ್ಸೆಲ್ ತೆರೆದು ನೋಡಿದಾಗ, ಅದರಲ್ಲಿ ಮಕ್ಕಳ ಬ್ಯಾಗ್‌ಗಳು ಇದ್ದವು. ಅದೇ ಬ್ಯಾಗ್‌ನಲ್ಲಿ ಡ್ರಗ್ಸ್ ಸಿಕ್ಕಿದೆ’ ಎಂದೂ ತಿಳಿಸಿದರು.

‘ಅಂತರರಾಷ್ಟ್ರೀಯ ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡಿದ್ದ ನೈಜಿರೀಯಾದ ಆರೋಪಿಗಳು, ಹಲವು ದಿನಗಳಿಂದ ಡ್ರಗ್ಸ್ ಸಾಗಣೆ ಹಾಗೂ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ಗೊತ್ತಾಗಿದೆ. ಆ ಆರೋಪಿಗಳು ಶುಕ್ಲಾ ಹಾಗೂ ಮರಿಯಾ ವಿಳಾಸಕ್ಕೆ ಡ್ರಗ್ಸ್ ಪಾರ್ಸೆಲ್ ಕಳುಹಿಸಿದ್ದರು. ಅದೇ ಡ್ರಗ್ಸ್‌ ಅನ್ನು ಆರೋಪಿಗಳು ಪರಿಚಯಸ್ಥರಿಗೆ ಮಾರಾಟ ಮಾಡಿ ಸಂಪಾದನೆ ಮಾಡುತ್ತಿದ್ದರೆಂಬ ಸಂಗತಿ ತನಿಖೆಯಿಂದ ಗೊತ್ತಾಗಿದೆ. ಈ ಡ್ರಗ್ಸ್ ಜಾಲದಲ್ಲಿ ಮತ್ತಷ್ಟು ಮಂದಿ ಶಾಮೀಲಾಗಿರುವ ಮಾಹಿತಿ ಇದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು