ಸೋಮವಾರ, ಮಾರ್ಚ್ 27, 2023
31 °C

ಹೃದಯ ಕಾಯಿಲೆಗೆ ತ್ವರಿತ ಚಿಕಿತ್ಸೆ ಅಗತ್ಯ: ಡಾ.ಸಿ.ಎನ್. ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‌ಬೆಂಗಳೂರು: ‘ಹಠಾತ್‌ ಹೃದಯಾಘಾತ ಅಥವಾ ಹೃದಯ ಸಂಬಂಧಿ ಗಂಭೀರ ಕಾಯಿಲೆ ಹೊಂದಿರುವವರಿಗೆ ಶೀಘ್ರವಾಗಿ ಚಿಕಿತ್ಸೆ ನೀಡಬೇಕು. ಇಲ್ಲವಾದಲ್ಲಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. 

ನಾಗರಬಾವಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಬುಧವಾರ ಅತ್ಯಾಧುನಿಕ ಕ್ಯಾಥ್‌ ಲ್ಯಾಬ್ ಉದ್ಘಾಟಿಸಿದ ಅವರು, ‘ಹೃದಯ ಸಂಬಂಧಿ ಕಾಯಿಲೆಗಳಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಕ್ಯಾಥ್‌ ಲ್ಯಾಬ್ ಸಹಾಯಕ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾಥ್‌ ಲ್ಯಾಬ್ ಪ್ರಾರಂಭಿಸಬೇಕು’ ಎಂದು ಹೇಳಿದರು. 

ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಎಂ. ಮಹದೇವಯ್ಯ, ‘ಆರೋಗ್ಯ ಕ್ಷೇತ್ರದಲ್ಲಿ ಅತ್ಯಾಧುನಿಕ ಉಪಕರಣ ಹೊಂದುವುದು ಅನಿವಾರ್ಯ. ಇಂದು ಯಾವುದೇ ವಯಸ್ಸಿನ ಮಿತಿ ಇಲ್ಲದೇ ಹೃದಯಾಘಾತ ಸಂಭವಿಸುತ್ತಿದೆ. ಅಂತವರನ್ನು ದೂರದ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅತ್ಯಾಧುನಿಕ ಕ್ಯಾಥ್ ಲ್ಯಾಬ್‌ ನಿರ್ಮಾಣಕ್ಕೆ ಆದ್ಯತೆ ನೀಡಬೇಕು’ ಎಂದರು. 

 ಫೋರ್ಟಿಸ್‌ ಆಸ್ಪತ್ರೆಯ ಹೃದಯ ತಜ್ಞ ಡಾ. ವಿವೇಕ್‌ ಜವಳಿ, ಡಾ.ಸಿ. ಪ್ರಭಾಕರ ಕೋರೆಗೋಳ್ ಹಾಗೂ ಆಸ್ಪತ್ರೆಯ ವ್ಯಾಪಾರ ವ್ಯವಹಾರದ ಮುಖ್ಯಸ್ಥ ಅಕ್ಷಯ್ ಒಲೇಟಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು