ಬೆಂಗಳೂರು: ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಚಾಲಕರ ನಿರ್ಲಕ್ಷ್ಯದಿಂದ ನಗರದಲ್ಲಿ ಪ್ರಸಕ್ತ ವರ್ಷ ಜನವರಿಯಿಂದ ಡಿಸೆಂಬರ್‌ವರೆಗೆ ಸಂಭವಿಸಿದ ಅಪಘಾತದಲ್ಲಿ 44 ಮಂದಿ ಮೃತಪಟ್ಟಿದ್ದಾರೆ.

ಅಪಘಾತದ ಅಂಕಿ–ಅಂಶ ಬಿಡುಗಡೆ ಮಾಡಿರುವ ಸಂಚಾರ ಪೊಲೀಸರು, ‘ಸಾರಿಗೆ ನಿಗಮಗಳ ಚಾಲಕರ ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಜೊತೆಗೆ, ಸಂಚಾರ ನಿಯಮ ಉಲ್ಲಂಘನೆಯೂ ಅಪಘಾತಕ್ಕೆ ಕಾರಣವಾಗುತ್ತಿವೆ’ ಎಂದಿದ್ದಾರೆ.

‘ಬಿಎಂಟಿಸಿ ಬಸ್ ಚಾಲಕರ ನಿರ್ಲಕ್ಷ್ಯದಿಂದ ಸಂಭವಿಸಿದ್ದ ಅಪಘಾತದಲ್ಲಿ 34 ಮಂದಿ ಮೃತಪಟ್ಟಿದ್ದು, 97 ಮಂದಿ ಗಾಯಗೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕರ ನಿರ್ಲಕ್ಷ್ಯದಿಂದ 10 ಮಂದಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

‘ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಚಾಲಕರು 17,264 ಬಾರಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಪುರಾವೆಗಳ ಸಮೇತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾಲ ಕಾಲಕ್ಕೆ ದಂಡದ ರಶೀದಿಗಳನ್ನು ನಿಗಮಗಳಿಗೆ ಕಳುಹಿಸಲಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.