ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೇಹಾ ಹತ್ಯೆ: ಸದ್ಯದಲ್ಲೇ ಚಾರ್ಜ್‌ಶೀಟ್ ಸಲ್ಲಿಕೆ

Published 19 ಮೇ 2024, 0:30 IST
Last Updated 19 ಮೇ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಆರೋಪಿ ಫಯಾಜ್‌ ಬಾಬಾಸಾಹೇಬ ಖೊಂಡಾನಾಯಕ್‌ ವಿರುದ್ಧ ನ್ಯಾಯಾಲಯಕ್ಕೆ ಸದ್ಯದಲ್ಲೇ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸುವ ಸಾಧ್ಯತೆ ಇದೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಬಂಧಿಸಿದ್ದರು. ತನಿಖೆ ಜವಾಬ್ದಾರಿ ವಹಿಸಿಕೊಂಡಿದ್ದ ಸಿಐಡಿ ಅಧಿಕಾರಿಗಳು, ಆರೋಪಿ ಫಯಾಜ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು.

‘ನೇಹಾ ಹಿರೇಮಠ ಕೊಲೆಗೆ ಸಂಬಂಧಪಟ್ಟಂತೆ ಎಲ್ಲ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ದೋಷಾರೋಪ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಹಲವರ ಹೇಳಿಕೆ ದಾಖಲು: ನೇಹಾ ಅವರ ಪೋಷಕರು, ಸಹಪಾಠಿಗಳು, ಸ್ನೇಹಿತರು, ಆರೋಪಿ ಹಾಗೂ ಆತನ ಕುಟುಂಬದವರು ಸೇರಿದಂತೆ ಹಲವರ ಹೇಳಿಕೆಯನ್ನು ಸಿಐಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಜೊತೆಗೆ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕೃತ್ಯಕ್ಕೆ ಸಂಬಂಧಪಟ್ಟ ಎಲ್ಲ ಸಂಗತಿಗಳನ್ನು ದೋಷಾರೋಪ ಪಟ್ಟಿ ಜೊತೆಯಲ್ಲಿ ಲಗತ್ತಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT