ನೆಲಮಂಗಲ: ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 75ಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ 4,300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ನೆಲಮಂಗಲ ಉತ್ಸವ’ದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ಮತ್ತು ಭವಿಷ್ಯದ ಶಿಕ್ಷಣಕ್ಕೆ ಅಗತ್ಯವಾದ ಕಿಟ್ ನೀಡಿ ಪುರಸ್ಕರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ಆರ್ಥಿಕ ಅಡಚಣೆಯಿಂದ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪ್ರತಿವರ್ಷ ₹30 ಸಾವಿರ ಶಿಷ್ಯವೇತನ ನೀಡುವ ಯೋಜನೆಯನ್ನು ಅಜೀಂ ಪ್ರೇಮ್ಜಿ ಪ್ರತಿಷ್ಠಾನದ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗಿದೆ. 37 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಇಂದಿನ ಕಾಲಘಟ್ಟಕ್ಕೆ ಅಗತ್ಯವಾದ ಕೌಶಲ ಮತ್ತು ವೃತ್ತಿ ಮಾರ್ಗದರ್ಶನದ ಪಠ್ಯ ಸಿದ್ಧವಾಗುತ್ತಿದೆ. ಶೀಘ್ರದಲ್ಲೇ ಎಲ್ಲ ಶಾಲಾ ಕಾಲೇಜುಗಳಿಗೂ ವಿತರಿಸಲಾಗುವುದು. ₹1,200 ಕೋಟಿಗೂ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಶಾಸಕ ಎನ್.ಶ್ರೀನಿವಾಸ್ ಅವರು ಶೈಕ್ಷಣಿಕ ಯೋಜನೆಗಳಿಗೂ ಒತ್ತು ನೀಡಿರುವುದು ಶ್ಲಾಘನೀಯ ಎಂದು ಹೇಳಿದರು.

ಶಾಸಕ ಎನ್.ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾವೇರಿ 2ನೇ ಹಂತದ ಯೋಜನೆಯಡಿ ಅರ್ಧ ಟಿಎಂಸಿ ಅಡಿ ನೀರು ಮಂಜೂರಾಗಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ, ಶೈಕ್ಷಣಿಕ ಅಭಿವೃದ್ಧಿಯೂ ಆಗಬೇಕು. ಕಳೆದ ನಾಲ್ಕು ವರ್ಷಗಳಿಂದ ಎಲ್ಲ ಶಾಲಾ ಕಾಲೇಜುಗಳಿಗೂ ನೋಟ್ ಪುಸ್ತಕ ವಿತರಿಸಿದ್ದೇನೆ. ಅಲ್ಲದೆ ಪ್ರತಿಭಾ ಪುರಸ್ಕಾರ ಆಯೋಜಿಸಿದ್ದೇನೆ ಎಂದು ವಿವರಿಸಿದರು.

ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾತನಾಡಿ, ಸಾಮಾಜಿಕ ಜಾಲತಾಣವನ್ನು ಭವಿಷ್ಯ ರೂಪಿಸಿಕೊಳ್ಳಲು ಬಳಸಿಕೊಳ್ಳಬೇಕು, ಪ್ರಯತ್ನಕ್ಕೆ ಯಶಸ್ಸು ಸಿಕ್ಕೇ ಸಿಗುತ್ತದೆ ಎಂದರು.

ಅವಧೂತ ಶ್ರೀ ವಿನಯ್ ಗುರೂಜಿ ಮಾತನಾಡಿ, ಸರ್ಕಾರ ಮಾಡುವ ಮೊದಲೇ ಮಠಗಳು ಶೈಕ್ಷಣಿಕ ಕ್ರಾಂತಿ ಮಾಡಿದ್ದವು. ಯುವ ಜನ ಜವಾಬ್ದಾರಿಯಿಂದ ಬದುಕಿದರೆ ಅಭಿವೃದ್ಧಿ ಸಾಧ್ಯ. ಉತ್ಸವದಲ್ಲಿ ಉದ್ಯೋಗ ಮೇಳ, ಕೃಷಿ ಮೇಳವನ್ನೂ ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಸವಣ್ಣದೇವರ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಶಿಷ್ಯವೇತನಕ್ಕೆ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳನ್ನೂ ಪರಿಗಣಿಸಲು ಸಚಿವರಿಗೆ ಮನವಿ ಮಾಡಿದರು. ವಿಧಾನ ಪರಿಷತ್ ಸದಸ್ಯ ರವಿ, ಮಾಜಿ ಶಾಸಕ ಗೌರೀಶಂಕರ್, ವಿಧಾನ ಪರಿಷತ್ನ ಮಾಜಿ ಸದಸ್ಯ ಬಿ.ಎಂ.ಎಲ್.ಕಾಂತರಾಜು, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ನಾಗರಾಜು, ಮಾಜಿ ಅಧ್ಯಕ್ಷ ಎಂ.ನಾರಾಯಣಗೌಡ, ನಗರಸಭೆ ಅಧ್ಯಕ್ಷ ಎನ್.ಗಣೇಶ್, ಮಾಜಿ ಅಧ್ಯಕ್ಷ ಪೂರ್ಣಿಮಾ ಸುಗ್ಗರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.