ಶುಕ್ರವಾರ, ಡಿಸೆಂಬರ್ 2, 2022
20 °C

ನೆಟ್ಟಕಲ್ಲಪ್ಪ ಜನ್ಮದಿನ: ಖೇಲೊ ಯೋಜನೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆ.ಎ. ನೆಟ್ಟಕಲ್ಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ವತಿಯಿಂದ ಖೇಲೊ ಯುವ ಬಿಎಸ್‌ಎನ್‌ಡಿಪಿ ಯೋಜನೆಗೆ ಚಾಲನೆ ನೀಡಲಾಯಿತು.

ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ಜನ್ಮದಿನ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಶ್ರೀನಿವಾಸ್ ಬಾಬು ಮಾತನಾಡಿ, ‘ನೆಟ್ಟಕಲ್ಲಪ್ಪ ಜನ್ಮದಿನದ ಪ್ರಯುಕ್ತ ಈ ಯೋಜನೆಗೆ ಚಾಲನೆ ನೀಡುತ್ತಿರುವುದು ಸಂತಸದ ವಿಷಯ. ಹಿಂದುಳಿದ ವರ್ಗಗಳಿಗೆ ನೆಟ್ಟಕಲ್ಲಪ್ಪ ಅವರು ನೀಡಿದ ಕೊಡುಗೆ ಅಪಾರ’ ಎಂದು ಸ್ಮರಿಸಿದರು.

ಬಿಎಸ್‌ಎನ್‌ಡಿಪಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಸೈದಪ್ಪ ಕೆ. ಗುತ್ತೇದಾರ್ ಮಾತನಾಡಿ, ‘ಪ್ರಸ್ತುತ ದಿನಗಳಲ್ಲಿ ಕೆ.ಎ.ನೆಟ್ಟಕಲ್ಲಪ್ಪ ಅವರ ಆದರ್ಶಗಳು ಯುವ ಪೀಳಿಗೆ ತಲುಪಬೇಕಿದೆ. ಅವರ ಸಿದ್ಧಾಂತ ಹಾಗೂ ಉದ್ದೇಶಗಳನ್ನು ಹಂತಹಂತವಾಗಿ ಜಾರಿಗೆ ತರಲು ಸಂಘಟನೆ ಶ್ರಮಿಸುತ್ತಿದೆ’ ಎಂದರು.

‘ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಮೊಬೈಲ್ ಫೋನ್ ಅತಿಯಾದ ಬಳಕೆಯಿಂದ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಯುವ ಸಮೂಹ ದಾರಿ ತಪ್ಪದಂತೆ ಶಿಕ್ಷಣ ನೀಡಲು ಹಾಸ್ಟೆಲ್‌ಗಳನ್ನು ನೆಟ್ಟಕಲ್ಲಪ್ಪ ಸ್ಥಾಪಿಸಿದ್ದರು. ಮೊಟ್ಟ ಮೊದಲ ಬಾರಿಗೆ ಗಂಜಿ ಕೇಂದ್ರ ತೆರೆದು ವಿದ್ಯಾರ್ಥಿಗಳಿಗೆ ನೆರವಾಗಿದ್ದರು’ ಎಂದು ಬಣ್ಣಿಸಿದರು.

‘ಯುವಜನರು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಲೆಂದು ಡೆಕ್ಕನ್ ಅಥ್ಲೆಟಿಕ್ಸ್ ಫೌಂಡೇಶನ್ ಸ್ಥಾಪಿಸಿ ನಾಡಿನ ಅನೇಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡಿದ್ದರು. ಅವರ ಚಿಂತನೆಗಳನ್ನು ಪ್ರಸಾರ ಮಾಡಲು ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಕ್ರೀಡೆಗಳನ್ನು ಆಯೋಜಿಸಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು