ಜುಲೈ 1ರಿಂದ ನೂತನ ಶೈಕ್ಷಣಿಕ ವರ್ಷ
ಬೆಂಗಳೂರು: ನೂತನ ಶೈಕ್ಷಣಿಕ ವರ್ಷವು (2021–22) ಜುಲೈ 1ರಿಂದ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೇಳಿದೆ.
ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಜೂನ್ 15ರಿಂದ ಆರಂಭಿಸಿ, ಆಗಸ್ಟ್ 31ರೊಳಗೆ ಮುಕ್ತಾಯಗೊಳಿಸಲು ಸೂಚಿಸಲಾಗಿದೆ.
ಭೌತಿಕ ತರಗತಿಗಳನ್ನು ನಡೆಸಲು ಸಾಧ್ಯವಾಗದಿದ್ದಲ್ಲಿ, ಜುಲೈ 1ರಿಂದ ಆನ್‌ಲೈನ್ ತರಗತಿ ನಡೆಸಲು ನಿರ್ದೇಶನ ನೀಡಲಾಗಿದೆ. ಅಲ್ಲದೆ, ದೂರದರ್ಶನ, ಸಂವೇದ, ಬಾನುಲಿ ಕಾರ್ಯಕ್ರಮಗಳ ಮೂಲಕವೂ ವಿದ್ಯಾರ್ಥಿಗಳ ಶಿಕ್ಷಣ ನಡೆಯುವಂತೆ ನೋಡಿಕೊಳ್ಳಬೇಕು ಎಂದೂ ಇಲಾಖೆ ಹೇಳಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬೇಸಿಗೆ ರಜೆ, ದಸರಾ ಹಾಗೂ ಇನ್ನಿತರ ರಜೆಗಳನ್ನು ಕಳೆದು, ಒಟ್ಟು 223 ಶಾಲಾ ಕರ್ತವ್ಯದ ದಿನಗಳು ಲಭ್ಯವಾಗಿವೆ.
ಬೋಧನಾ ಶುಲ್ಕದ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎಸ್. ಸುರೇಶ್‌ಕುಮಾರ್, ‘ಶಾಲಾ ಬೋಧನಾ ಶುಲ್ಕದ ಕುರಿತ ಪ್ರಕರಣ ಹೈಕೋರ್ಟ್‌ನಲ್ಲಿದೆ. ಅದರ ಆದೇಶದ ನಂತರ ಈ ಕುರಿತು ನಿರ್ಧಾರ ಪ್ರಕಟಿಸಲಾಗುವುದು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.