ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವನಗುಡಿ: ನೂತನ ಆರ್ಟ್‌ ಗ್ಯಾಲರಿ ಉದ್ಘಾಟನೆ

Last Updated 12 ನವೆಂಬರ್ 2021, 19:34 IST
ಅಕ್ಷರ ಗಾತ್ರ

ಬೆಂಗಳೂರು: ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್ ಸಂಸ್ಥೆಯು ಬಸವನಗುಡಿಯಲ್ಲಿ ತನ್ನ ನೂತನ ಆರ್ಟ್‌ ಗ್ಯಾಲರಿಯನ್ನು ಶುಕ್ರವಾರ ಅನಾವರಣಗೊಳಿಸಿತು.

ಇದೇ ವೇಳೆ ಕರ್ನಾಟಕ ಲಲಿತಕಲಾ ಅಕಾಡೆಮಿ ಸಹಯೋಗದಲ್ಲಿ ಚಿತ್ರಕಲಾ ಪ್ರದರ್ಶನಕ್ಕೂ ಚಾಲನೆ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ,‘ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್ ಸಂಸ್ಥೆಯು ಏಳು ದಶಕಗಳಿಂದ ಸಮಾಜಮುಖಿ ಸಾಂಸ್ಕೃತಿಕ ಚಟುವಟಿಕೆಗಳ ನೆಲೆಯಾಗಿದೆ’ ಎಂದರು.

ಸಂಸ್ಥೆಯ ಗೌರವ ಕಾರ್ಯದರ್ಶಿಅರಕಲಿ ವೆಂಕಟೇಶ್ ಪ್ರಸಾದ್, ‘ಈ ಆರ್ಟ್‌ ಗ್ಯಾಲರಿಯು ಜಗತ್ತಿನ ವಿವಿಧ ಕಲಾ ಪ್ರಕಾರಗಳನ್ನು ಬೆಂಗಳೂರಿಗರಿಗೆ ಪರಿಚಯಿಸುವ ಉದ್ದೇಶ ಹೊಂದಿದೆ. ನಗರ ಕೇಂದ್ರಭಾಗದಲ್ಲಿರುವ ಈ ಸ್ಥಳ ಹಸಿರು ಸಿರಿಯಿಂದ ಕೂಡಿದೆ. ಇಲ್ಲಿ ಉತ್ತಮವಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಇಲ್ಲಿಗೆ ಸುಲಭವಾಗಿ ಬರಲು ಸಾರಿಗೆ ಸಂಪರ್ಕವೂ ಇದೆ’ ಎಂದರು.

ಸಂಸ್ಥೆಯ ಚಿತ್ರಕಲಾ ಶಿಕ್ಷಕರಾದ ಟಿಕೆಎನ್ ಪ್ರಸಾದ್ ಹಾಗೂ ಸಂಜಯ್ ಚಪೋಲ್ಕರ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ನವೆಂಬರ್ 14ರವರೆಗೆ ಚಿತ್ರಕಲಾ ಪ್ರದರ್ಶನ ನಡೆಯಲಿದೆ. ಪ್ರತಿ ವರ್ಷದಂತೆ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸುವ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಅದೇದಿನ ಬಹುಮಾನ ವಿತರಣೆ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT