ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಇಂದಿರಾ ಕ್ಯಾಂಟೀನ್‌ | ಶೀಘ್ರದಲ್ಲಿಯೇ ನಿರ್ಧಾರ: ತುಷಾರ್‌ ಗಿರಿನಾಥ್‌

Published 29 ಮೇ 2024, 23:19 IST
Last Updated 29 ಮೇ 2024, 23:19 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಹೊಸ ಇಂದಿರಾ ಕ್ಯಾಂಟೀನ್‌ ತೆರೆಯಲು ಹಾಗೂ ಹೊಸ ಮೆನು ಆರಂಭಿಸಲು ಟೆಂಡರ್‌ ಅಂತಿಮಗೊಳಿಸುವ ವಿಚಾರ ಸಚಿವ ಸಂಪುಟ ಮುಂದಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

‘ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸಚಿವ ಸಂಪುಟ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಅಲ್ಲಿ ನಿರ್ಧಾರವಾದಂತೆ ನಾವು ಕ್ರಮ ಕೈಗೊಳ್ಳುತ್ತೇವೆ’ ಎಂದು ಸುದ್ದಿಗಾರರಿಗೆ ಬುಧವಾರ ಮಾಹಿತಿ ನೀಡಿದರು.

ಈಗಾಗಲೇ ನಗರದಲ್ಲಿ ಸುಮಾರು 700 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎಲ್ಲ ಗುಂಡಿಗಳನ್ನೂ ದುರಸ್ತಿ ಮಾಡಲಾಗುತ್ತದೆ. ಅತ್ಯಾಧುನಿಕ ಕ್ಯಾಮೆರಾಗಳಿರುವ 15 ವಾಹನಗಳು ಮುಖ್ಯ ಹಾಗೂ ಉಪ ಮುಖ್ಯರಸ್ತೆಗಳಲ್ಲಿ ಸಂಚರಿಸಲಿವೆ. ದಿನವೊಂದಕ್ಕೆ ನಾಲ್ಕರಿಂದ ಐದು ತಾಸು, ಗಂಟೆಗೆ ಸುಮಾರು 5 ಕಿ.ಮೀ ವೇಗದಲ್ಲಿ ಸಂಚರಿಸುವ ವಾಹನ, ಗುಂಡಿಗಳು ಹಾಗೂ ರಸ್ತೆಯ ಸ್ಥಿತಿಯ ಮಾಹಿತಿ ನೀಡಲಿದೆ. ಇದರಿಂದ ರಸ್ತೆಗಳ ನಿರ್ವಹಣೆ ಉತ್ತಮವಾಗಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT