ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಚಾರ ನಿಯಮ ಉಲ್ಲಂಘನೆ: ದಂಡ ಪಾವತಿಗೆ ಹೊಸ ಲಿಂಕ್‌

Published : 2 ಆಗಸ್ಟ್ 2024, 23:49 IST
Last Updated : 2 ಆಗಸ್ಟ್ 2024, 23:49 IST
ಫಾಲೋ ಮಾಡಿ
Comments

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗಾಗಿ ದಂಡ ಪಾವತಿಸುವಂತೆ ಪೊಲೀಸರ ಹೆಸರಿನಲ್ಲೇ ಸೈಬರ್ ವಂಚಕರು ಸಂದೇಶ ಕಳುಹಿಸಿ ಜನರನ್ನು ವಂಚಿಸುತ್ತಿದ್ದು, ಅಧಿಕೃತ ಲಿಂಕ್‌ ತೆರೆದು ದಂಡ ಪಾವತಿಸುವಂತೆ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್​ ಕುಮಾರ್ ಮನವಿ ಮಾಡಿದ್ದಾರೆ.

echallan.ksp.gov.in ಅಧಿಕೃತ ಲಿಂಕ್ ಆಗಿದೆ ಎಂದು ತಿಳಿಸಿದ್ದಾರೆ.‌

‘ವಂಚಕರು https://echallanparivahan.in/ ಲಿಂಕ್‌ ತೆರೆದು ದಂಡ ಪಾವತಿಸುವಂತೆ ವಂಚಕರು ಮೊಬೈಲ್‌ಗೆ ಸಂದೇಶ ಕಳುಹಿಸುತ್ತಿದ್ದಾರೆ. ಇದನ್ನು ತೆರೆದ ಕೂಡಲೇ ಬ್ಯಾಂಕ್‌ ಖಾತೆಯನ್ನು ಹ್ಯಾಕ್‌ ಮಾಡಿ ಕ್ಷಣಾರ್ಧದಲ್ಲಿ ಹಣವನ್ನು ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT