ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿವಿ ನೂತನ ಸ್ಟುಡಿಯೊ ಉದ್ಘಾಟನೆ

Published 10 ಆಗಸ್ಟ್ 2023, 15:38 IST
Last Updated 10 ಆಗಸ್ಟ್ 2023, 15:38 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ ₹ 60 ಲಕ್ಷ ವೆಚ್ಚದಲ್ಲಿ 1,324 ಚದರ ಅಡಿ ವಿಸ್ತೀರ್ಣದಲ್ಲಿ ನೂತನವಾಗಿ ನಿರ್ಮಿಸಿರುವ ಟಿವಿ ಸ್ಟುಡಿಯೊವನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಉದ್ಘಾಟಿಸಿದರು. 

ನಂತರ ಮಾತನಾಡಿದ ಅವರು, ‘ಮಾಧ್ಯಮ ಸಂಸ್ಥೆಗಳಿಗೆ ಅಗತ್ಯವಿರುವ ತಾಂತ್ರಿಕತೆ ಪರಿಣತಿಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಅದಕ್ಕೆ ಬೇಕಾದ ಎಲ್ಲ ಸೌಕರ್ಯಗಳು ಈ ನೂತನ ಸ್ಟುಡಿಯೊದಲ್ಲಿದ್ದು, ವಿದ್ಯಾರ್ಥಿಗಳು  ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ.ಎಂ.ಸಿ. ಸುಧಾಕರ್‌ ಲ್ಯಾಪ್‌ಟಾಪ್ ವಿತರಣೆ ಮಾಡಿದರು. 

ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ., ಕುಲಸಚಿವರಾದ ಶೇಕ್ ಲತೀಫ್, ಮೌಲ್ಯಮಾಪನ ವಿಭಾಗದ ಕುಲಸಚಿವ ಸಿ. ಶ್ರೀನಿವಾಸ್, ಹಣಕಾಸು ಅಧಿಕಾರಿ ಅಜಿತ್ ಕುಮಾರ್ ಹೆಗ್ಡೆ, ವಿದ್ಯುನ್ಮಾನ ವಿಭಾಗದ ಸಂಯೋಜಕಿ ರಾಜೇಶ್ವರಿ, ಸಹ ಪ್ರಾಧ್ಯಾಪಕರಾದ ವಾಹಿನಿ, ಟಿ.ಶ್ರೀಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT