ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷಾಚರಣೆ: ಪಾನಮತ್ತ ಚಾಲನೆ ವಿರುದ್ಧ 146 ಪ್ರಕರಣ

Last Updated 24 ಡಿಸೆಂಬರ್ 2022, 22:00 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಪಾನಮತ್ತ ಚಾಲನೆ ಮಾಡುವವರ ಪತ್ತೆಗಾಗಿ ಸಂಚಾರ ಪೊಲೀಸರು ಶುಕ್ರವಾರದಿಂದ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.

‘ಪಾನಮತ್ತ ಚಾಲನೆಯಿಂದ ನಗರದಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಮೃತರು ಹಾಗೂ ಗಾಯಾಳುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೊಸ ವರ್ಷಾಚರಣೆ ಹತ್ತಿರವಾಗುತ್ತಿದ್ದು, ಕೆಲವರು ಪಾನಮತ್ತರಾಗಿ ವಾಹನ ಚಾಲನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ, ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ. ಡಿ. 31ರವರೆಗೂ ಕಾರ್ಯಾಚರಣೆ ಚಾಲ್ತಿಯಲ್ಲಿರಲಿದೆ’ ಎಂದು ಸಂಚಾರ ವಿಭಾಗದ ವಿಶೇಷ ಕಮಿಷನರ್ ಎಂ.ಎ. ಸಲೀಂ ಹೇಳಿದರು.

‘ನಗರದ ಹಲವು ಠಾಣೆಗಳ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ವಾಹನಗಳನ್ನು ತಡೆದು ಚಾಲಕರನ್ನು ಆಲ್ಕೋಮೀಟರ್‌ ಮೂಲಕ ತಪಾಸಣೆಗೆ ಒಳಪಡಿಸಲಾಯಿತು. 146 ಚಾಲಕರು ಮದ್ಯ ಕುಡಿದು ವಾಹನ ಚಲಾಯಿಸುತ್ತಿದ್ದ ಸಂಗತಿ ಪತ್ತೆಯಾಯಿತು. ಅವರನ್ನು ಆಸ್ಪತ್ರೆಗೂ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಿಸಿ, ವಾಹನ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

‘ನ್ಯಾಯಾಲಯದಲ್ಲಿ ದಂಡ ಪಾವತಿಸಿ ವಾಹನ ಬಿಡಿಸಿಕೊಂಡು ಹೋಗುವಂತೆ ನೋಟಿಸ್ ಸಹ ನೀಡಲಾಗಿದೆ. ಜೊತೆಗೆ, ಕೆಲವರ ಚಾಲನಾ ಪರವಾನಗಿ ಅಮಾನತಿಗೂ ಕ್ರಮ ಕೈಗೊಳ್ಳಲಾಗಿದೆ. ಅಪಘಾತ ತಡೆಯುವುದು ನಮ್ಮ ಮುಖ್ಯ ಉದ್ದೇಶ. ಹೀಗಾಗಿ, ಜನರು ಪಾನಮತ್ತರಾಗಿ ಚಾಲನೆ ಮಾಡದೇ ಸಂಚಾರ ನಿಯಮ ಪಾಲಿಸಬೇಕು’ ಎಂದೂ ಅವರು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT