ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಹಲವೆಡೆ ಮಳೆ

Last Updated 16 ಮಾರ್ಚ್ 2023, 23:59 IST
ಅಕ್ಷರ ಗಾತ್ರ

ಬೆಂಗಳೂರು: ಬೇಸಿಗೆ ಆರಂಭವಾಗಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ನಗರದ ಹಲವು ಕಡೆಗಳಲ್ಲಿ ಗುರುವಾರ ರಾತ್ರಿ ಸಾಧಾರಣ ಮಳೆ ಸುರಿದು ತಂಪೆರೆಯಿತು.

ಹಲವು ದಿನಗಳಿಂದ ನಗರದಲ್ಲಿ ‌ಬಿಸಿಲಿನ ತಾಪ ಹೆಚ್ಚಿದೆ. ಗುರುವಾರ ಸಂಜೆಯಿಂದ ಹಲವೆಡೆ ಮೋಡ ಕವಿದ ವಾತಾವರಣ ಕಾಣಿಸಿತು. ಸಂಜೆಯೇ ಹಲವು ಪ್ರದೇಶಗಳಲ್ಲಿ ತುಂತುರು ಮಳೆ ಶುರುವಾಗಿತ್ತು. ರಾತ್ರಿ ಬಹುತೇಕ ಕಡೆ ಗುಡುಗು-ಸಿಡಿಲು ಸಹಿತ ಮಳೆ ಆಯಿತು.

ರಾಜರಾಜೇಶ್ವರಿ ನಗರ, ಕೆಂಗೇರಿ, ದೀಪಾಂಜಲಿನಗರ, ಗಿರಿನಗರ, ಜಯನಗರ, ವಿಜಯನಗರ, ರಾಜಾಜಿನಗರ, ಯಶವಂತಪುರ, ಮಲ್ಲೇಶ್ವರ, ವಿದ್ಯಾರಣ್ಯಪುರ, ಗಾಂಧಿನಗರ, ಶಿವಾಜಿನಗರ, ಎಂ.ಜಿ.ರಸ್ತೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯಾಗಿದೆ.

‘ನಗರದ ಬಹುತೇಕ ‌ಕಡೆ ಮಳೆ ಆಗಿದೆ. ಹಾನಿ‌ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು‌ ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

‘ಬಿಸಿಲಿನ ಪ್ರಮಾಣ ಹೆಚ್ಚಿರಲಿದೆ. ಇಂದು ಸಹ‌ ನಗರದ ಕೆಲವೆಡೆ ಮಳೆಯಾಗುವ ಸಾಧ್ಯತೆ ‌ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT