ಪೀಣ್ಯ ದಾಸರಹಳ್ಳಿ: ಪ್ರತಿದಿನ ದಿನಪತ್ರಿಕೆಗಳನ್ನು ಓದುವುದರಿಂದ ಸಮಾಜದಲ್ಲಿನ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳುವುದಲ್ಲದೆ, ಸ್ಪರ್ಧಾತ್ಮಕ ಪರೀಕ್ಷೆಗೆ ದಾರಿದೀಪವಾಗುತ್ತದೆ ಎಂದು ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.
ಕಾಳಸ್ತ್ರೀ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳನ್ನು ಉಚಿತವಾಗಿ ವಿತರಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಎಸ್. ಪ್ರಸಾದ ಸ್ವಾಮಿ, ‘ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡೆಯಲ್ಲಿ ವಿಜೇತರಾಗಿ ಕಾಲೇಜಿಗೆ ಹೆಸರು ತಂದಿದ್ದಾರೆ’ ಎಂದು ಶ್ಲಾಘಿಸಿದರು.
ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ದೈಹಿಕ ಶಿಕ್ಷಣ ನಿರ್ದೇಶಕರಾದ ಅಬಿದಾ ಬೇಗಂ, ಸಾಂಸ್ಕೃತಿಕ ಸಮಿತಿ ಸಂಚಾಲಕ ಸಿ. ದೇವರಾಜ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.