ಬುಧವಾರ, ಮಾರ್ಚ್ 3, 2021
25 °C

ಎನ್‌ಎಚ್‌ಎಐನಿಂದ ಸ್ವಚ್ಛ ಭಾರತ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗಾಂಧಿ ಜಯಂತಿ ಅಂಗವಾಗಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ವತಿಯಿಂದ ಬುಧವಾರ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ರಸ್ತೆ ಮತ್ತು ಸಾರ್ವಜನಿಕ ಸ್ಥಳದಲ್ಲಿ ಬಿದ್ದಿದ್ದ ಕಸ ಸಂಗ್ರಹಿಸಿದ ಸಿಬ್ಬಂದಿ ಅದನ್ನು ವಿಲೇವಾರಿ ಮಾಡಿದರು. ಪ್ಲಾಸ್ಟಿಕ್‌ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

ಶುಲ್ಕ ಸಂಗ್ರಹ ಕೇಂದ್ರಗಳ ಬಳಿಯ ಪ್ಲಾಸ್ಟಿಕ್‌ ಸಂಗ್ರಹಿಸಿದರು. ಪ್ಲಾಸ್ಟಿಕ್‌ ಕರಗಿಸಿ, ಕಾಂಕ್ರೀಟ್‌ನಂತೆ ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಸಾರ್ವಜನಿಕರಿಗೆ ತಿಳಿಸಿದರು.

‘ಸ್ವಚ್ಛತೆಯೇ ಸೇವೆ’ ಎಂಬ ಸಾಲುಗಳಿದ್ದ ಭಿತ್ತಿಪತ್ರಗಳನ್ನು ಸಿಬ್ಬಂದಿ ಪ್ರದರ್ಶಿಸಿದರು. ಪ್ರಾಧಿಕಾರದ ವಿವಿಧ ಕಚೇರಿಗಳ ಸಿಬ್ಬಂದಿ ಅಭಿಯಾನದಲ್ಲಿ ಪಾಲ್ಗೊಂಡರು.  

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು