ಬೆಂಗಳೂರು: ‘ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಎಚ್ಎಂ) ಮತ್ತು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ (ಎನ್ಯುಎಚ್ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯನ್ನು ಮೌಲ್ಯಮಾಪನದ ಹೆಸರಿನಲ್ಲಿ ಕೆಲಸದಿಂದ ತೆಗೆಯಬಾರದು’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ಸರ್ಕಾರಕ್ಕೆ ಆಗ್ರಹಿಸಿದೆ.

‘ಅನುದಾನ ಉಳಿಸಲು ಆರೋಗ್ಯ ಇಲಾಖೆಯು ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವ ಕ್ರಮ ಕೈಗೊಂಡಿದ್ದು, 15-18 ವರ್ಷಗಳಿಂದ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಅನ್ಯಾಯವಾಗಲಿದೆ. ಆರ್ಥಿಕ ಸಂಕಷ್ಟದಿಂದ ಅವರ ಕುಟುಂಬಗಳು ಬೀದಿಗೆ ಬೀಳಲಿವೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಧ್ಯಸ್ಥಿಕೆ ವಹಿಸಿ, ಸಮಸ್ಯೆ ಪರಿಹರಿಸಬೇಕು’ ಎಂದು ಸಂಘದ ಅಧ್ಯಕ್ಷ ಶ್ರೀಕಾಂತ್ ಸ್ವಾಮಿ ಒತ್ತಾಯಿಸಿದ್ದಾರೆ.

‘ಎನ್ಎಚ್ಎಂ-ಎನ್ಯುಎಚ್ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಯನ್ನು ಪ್ರಸಕ್ತ ಸಾಲಿಗೆ ಕೆಲಸದಲ್ಲಿ ಮುಂದುವರಿಸುವಂತೆ ಕೂಡಲೇ ಆದೇಶ ಹೊರಡಿಸಬೇಕು. ಮೌಲ್ಯಮಾಪನದ ಪ್ರಕ್ರಿಯೆ ರದ್ದುಪಡಿಸಬೇಕು. ದೀರ್ಘಕಾಲ ಸೇವೆ ಸಲ್ಲಿಸಿದವರನ್ನು ಕೆಲಸದಿಂದ ತೆಗೆಯದಂತೆ ಕ್ರಮವಹಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.