ಬೆಂಗಳೂರು: ‘ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿಯನ್ನು ‘ಕಾರ್ಯಕ್ಷಮತೆ ಮೌಲ್ಯಮಾಪನ’ದ ಹೆಸರಿನಲ್ಲಿ ವಜಾಗೊಳಿಸಬಾರದು’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

ಈ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿದ್ದಾರೆ.

‘ಎನ್ಎಚ್ಎಂ ಅಡಿ 30 ಸಾವಿರ ಸಿಬ್ಬಂದಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನೌಕರರ ಗುತ್ತಿಗೆ ನವೀಕರಣದ ಬಗ್ಗೆ ಈವರೆಗೂ ನಿರ್ಧಾರ ಕೈಗೊಂಡಿಲ್ಲ. ಇದರಿಂದ ನೌಕರರು ಉದ್ಯೋಗ ಭದ್ರತೆ ಇಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ. ‘ಕಾರ್ಯಕ್ಷಮತೆ ಮೌಲ್ಯಮಾಪನ’ದ ನೆಪದಲ್ಲಿ ದೀರ್ಘ ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ವಜಾಗೊಳಿಸಲು ಕ್ರಮಕೈಗೊಳ್ಳಬಾರದು’ ಎಂದು ಆಗ್ರಹಿಸಿದ್ದಾರೆ.

‘ಈ ಸಿಬ್ಬಂದಿಯನ್ನು ಕೈಬಿಟ್ಟಲ್ಲಿ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗುತ್ತವೆ. ಆದ್ದರಿಂದ ಅನಗತ್ಯ ಮೌಲ್ಯಮಾಪನ ಹಾಗೂ ಸಿಬ್ಬಂದಿಯನ್ನು ತೆಗೆದುಹಾಕುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಈಗಾಗಲೇ ಪೂರ್ಣಗೊಂಡ ‘ಕಾರ್ಯಕ್ಷಮತೆ ಮೌಲ್ಯಮಾಪನ’ದ ಆಧಾರದ ಮೇಲೆ ನೌಕರರ ಮುಂದುವರಿಕೆಗೆ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.