ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರ ಸಂಘಟನೆ ಜೊತೆ ನಂಟು: ಶಂಕಿತ ಆರೋಪಿ ಆರೀಫ್‌ನನ್ನು ವಶಕ್ಕೆ ಪಡೆದ ಎನ್‌ಐಎ

Last Updated 11 ಫೆಬ್ರುವರಿ 2023, 5:31 IST
ಅಕ್ಷರ ಗಾತ್ರ

ಬೆಂಗಳೂರು: ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಆರೋಪದಡಿ ಆರೀಫ್ ಎಂಬುವರನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ನಗರದ ಥಣಿಸಂದ್ರದಲ್ಲಿ ವಶಕ್ಕೆ ಪಡೆದಿದ್ದಾರೆ.

'ನಗರದ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೀಫ್, 2 ವರ್ಷಗಳಿಂದ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ. ಸಿರಿಯಾ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ' ಎಂದು ಎನ್‌ಐಎ ಮೂಲಗಳು ತಿಳಿಸಿವೆ.

'ಆರೀಫ್ ಮನೆ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ. ಲ್ಯಾಪ್‌ಟಾಪ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.'
'ಸಾಮಾಜಿಕ ಮಾಧ್ಯಮ ಹಾಗೂ ಜಾಲತಾಣ ಮೂಲಕ ಉಗ್ರ ಸಂಘಟನೆ ಸದಸ್ಯರ ಜೊತೆ ಮಾತುಕತೆ ನಡೆಸುತ್ತಿದ್ದ. ಈತನ ವಿಚಾರಣೆ ಬಳಿಕವೇ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ' ಎಂದು ಎನ್ಐಎ ಮೂಲಗಳು ಹೇಳಿವೆ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT