ಬೆಂಗಳೂರು: ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರ್ಷಾದ್ ಖಾನ್ ಅವರನ್ನು ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ನಗರದಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಹಾಗೂ ಗ್ರೆನೇಡ್ ಸಂಗ್ರಹಿಸಿಕೊಂಡಿದ್ದ ಆರೋಪದ ಮೇರೆಗೆ ಅರ್ಷಾದ್ ಖಾನ್ ಅವರನ್ನು ಈ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು.

‘ಅರ್ಷಾದ್ ಖಾನ್ ಅವರಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ನಿಗದಿತ ದಿನದಂದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆಯೂ ನ್ಯಾಯಾಲಯ ಸೂಚಿಸಿತ್ತು. ಆದರೆ, ನಿಯಮದಂತೆ ಅವರು ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು’ ಎಂದು ಮೂಲಗಳು ಹೇಳಿವೆ.

ಎನ್ಐಎ ವಿಶೇಷ ನ್ಯಾಯಾಲಯವು ಅರ್ಷಾದ್ ಖಾನ್ ವಿರುದ್ಧ ಬಂಧನ ವಾರಂಟ್ ಮಾಡಿ ಘೋಷಿತ ಅಪರಾಧಿ ಆದೇಶ ಹೊರಡಿಸಿತ್ತು. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಶಂಕಿತ ಉಗ್ರನನ್ನು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.

‘ಶಂಕಿತ ಉಗ್ರ ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಯಾರ ಜತೆಗೆ ಸಂಪರ್ಕದಲ್ಲಿದ್ದರು, ಬೇರೆ ಪ್ರದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಏನಾದರೂ ಸಂಚು ರೂಪಿಸಲಾಗಿತ್ತೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಎನ್ಐಎ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.