ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕಿತ ಉಗ್ರರ ವಿರುದ್ಧ ಚಾರ್ಜ್‌ಶೀಟ್

Last Updated 1 ಏಪ್ರಿಲ್ 2021, 17:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಯುವಕರನ್ನು ನೇಮಿಸಿಕೊಂಡು ತರಬೇತಿ ನೀಡುತ್ತಿದ್ದ ಆರೋಪದಡಿ ಬಂಧಿಸಲಾಗಿದ್ದ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ನಗರದ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ತಮಿಳುನಾಡಿನ ಅಹ್ಮದ್ ಅಬ್ದುಲ್ ಖಾದರ್ ಹಾಗೂ ಇರ್ಫಾನ್ ನಾಸೀರ್‌ನನ್ನು ಕಳೆದ ಅಕ್ಟೋಬರ್‌ನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಅವರಿಂದ ಲ್ಯಾಪ್‌ಟಾಪ್‌, ಕಂಪ್ಯೂಟರ್ ಹಾಗೂ ಹಲವು ಸಾಧನಗಳನ್ನು ಜಪ್ತಿ ಮಾಡಿದ್ದರು.

ಬಂಧಿತ ಆರೋಪಿಗಳು, 'ಕುರಾನ್ ಸರ್ಕಲ್' ಎಂಬ ಗುಂಪು ರಚಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ನೇಮಿಸಿಕೊಳ್ಳುತ್ತಿದ್ದರು. ನಗರದಲ್ಲಿರುವ ಯುವಕರನ್ನು ಸೆಳೆದು, ಅವರಿಗೆ ತರಬೇತಿಯನ್ನೂ ನೀಡುತ್ತಿದ್ದರು. ಇಸ್ಲಾಮಿಕ್‌ ಸ್ಟೇಟ್ ಉಗ್ರಗಾಮಿ ಸಂಘಟನೆ ಜೊತೆಯೂ ಆರೋಪಿಗಳ ನಂಟಿದ್ದ ಮಾಹಿತಿ ಎನ್‌ಐಎಗೆ ಲಭ್ಯವಾಗಿತ್ತು. ಬೆಂಗಳೂರು ಹಾಗೂ ಇತರೆಡೆ ಭಯೋತ್ಪಾದಕ ಕೃತ್ಯ ಎಸಗುವುದು ಆರೋಪಿಗಳ ಉದ್ದೇಶವಾಗಿತ್ತು.

ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದ ಎನ್‌ಐಎ, ಆರೋಪಿಗಳನ್ನು ಬಂಧಿಸಿತ್ತು. ಕೃತ್ಯಕ್ಕೆ ಸಂಬಂಧಪಟ್ಟ ಪುರಾವೆಗಳನ್ನು ಸಂಗ್ರಹಿಸಿರುವ ಎನ್‌ಐಎ, ಆರೋಪಿಗಳ ವಿರುದ್ಧ ಇದೀಗ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸದ್ಯದಲ್ಲೇ ಪ್ರಕರಣದ ವಿಚಾರಣೆಯೂ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT