ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಲಭೆ: ಎಸ್‌ಡಿಪಿಐ, ಪಿಎಫ್‌ಐ ಕಚೇರಿ ಮೇಲೆ ಎನ್‌ಐಎ ದಾಳಿ

Last Updated 18 ನವೆಂಬರ್ 2020, 21:31 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು, ನಗರದ 43 ಕಡೆಗಳಲ್ಲಿ ಬುಧವಾರ ದಾಳಿ ಮಾಡಿದರು.

‘ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ಘಟಕದ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿ ತಪಾಸಣೆ ನಡೆಸಲಾಯಿತು. ಕತ್ತಿ, ಚಾಕು, ಕಬ್ಬಿಣದ ರಾಡ್‌ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಎನ್‌ಐಎ ಅಧಿಕಾರಿಯೊಬ್ಬರು ತಿಳಿಸಿದರು.

‘ಆಗಸ್ಟ್ 11ರಂದು ರಾತ್ರಿ ನಡೆದಿದ್ದ ಗಲಭೆ ಸಂಬಂಧ ಈಗಾಗಲೇ 293 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಎಸ್‌ಇಪಿಐ ಹಾಗೂ ಪಿಎಫ್‌ಐ ಪಕ್ಷಗಳ ಕಾರ್ಯಕರ್ತರೂ ಭಾಗಿಯಾಗಿರುವ ಮಾಹಿತಿ ಇದ್ದು, ಅದೇ ಕಾರಣಕ್ಕೆ ಪಕ್ಷಗಳ ಕಚೇರಿ ಹಾಗೂ ಆರೋಪಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ’ ಎಂದೂ ಹೇಳಿದರು.

‘ಬೆಳಿಗ್ಗೆಯಿಂದ ಸಂಜೆಯವರೆಗೂ ತಪಾಸಣೆ ನಡೆಸಲಾಯಿತು. ಗಲಭೆಗೆ ಸಂಬಂಧಪಟ್ಟ ಸಾಕ್ಷ್ಯಗಳನ್ನು ಸಂಗ್ರಹಿಸಲಾಯಿತು. ಇವುಗಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮತ್ತಷ್ಟು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೂ ಬಲೆ ಬೀಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT