ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ಕಡೆ ಎನ್‌ಐಎ ದಾಳಿ: ಸ್ಫೋಟಕ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳು ಪತ್ತೆ

Published 18 ಡಿಸೆಂಬರ್ 2023, 10:37 IST
Last Updated 18 ಡಿಸೆಂಬರ್ 2023, 10:37 IST
ಅಕ್ಷರ ಗಾತ್ರ

ಬೆಂಗಳೂರು: ನಗರದ 20 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆಸುತ್ತಿದ್ದು, ಸೋಡಿಯಂ ನೈಟ್ರೇಟ್ ಸೇರಿದಂತೆ ಸ್ಫೋಟಕ ತಯಾರಿಕೆಗೆ ಬಳಸುವ ಹಲವು ಬಗೆಯ ಕಚ್ಚಾ ವಸ್ತುಗಳು ಪತ್ತೆಯಾಗಿವೆ.

ಆರ್‌.ಟಿ.ನಗರ, ಬ್ಯಾಡರಹಳ್ಳಿ, ಶಿವಾಜಿನಗರ, ಪುಲಿಕೇಶಿನಗರ, ಜೆ.ಸಿ. ನಗರದಲ್ಲಿರುವ ಹಲವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ. ಬ್ಯಾಡರಹಳ್ಳಿಯಲ್ಲಿರುವ ಶಮೀವುಲ್ಲಾ ಎಂಬುವವರ ಬಾಡಿಗೆ ಮನೆಯಲ್ಲಿ 7 ಕೆ.ಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿರುವ ಮಾಹಿತಿ ಇದೆ.

ದಾಳಿ ಸಂದರ್ಭದಲ್ಲಿ ಹಲವರನ್ನು ವಶಕ್ಕೆ ಪಡೆದಿರುವ ಎನ್‌ಐಎ ಅಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ. ಪುರಾವೆಗಳನ್ನು ಆಧರಿಸಿ ಎಲ್ಲರನ್ನೂ ಬಂಧಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT