ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಸ್‌ ರಸ್ತೆಯಲ್ಲಿ ಅಪಘಾತ: ಮಹಿಳೆ ಸಾವು

Last Updated 1 ಮೇ 2022, 16:24 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಡರಹಳ್ಳಿ ಬಳಿ ನೈಸ್ ರಸ್ತೆಯಲ್ಲಿ ಲಾರಿ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಸುಲೋಚನಾ (24) ಎಂಬುವರು ಮೃತಪಟ್ಟಿದ್ದಾರೆ.

‘ಆನೇಕಲ್‌ನ ಸುಲೋಚನಾ ಅವರು ಕುಟುಂಬ ಸಮೇತ ಧರ್ಮಸ್ಥಳಕ್ಕೆ ಹೋಗಿದ್ದರು. ಅಲ್ಲಿಂದ ಕಾರಿನಲ್ಲಿ ವಾಪಸು ಬರುತ್ತಿದ್ದಾಗ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಮಗು ಸೇರಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಅತೀ ವೇಗವಾಗಿ ಹೊರಟಿದ್ದ ಲಾರಿ, ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಜಖಂಗೊಂಡಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT