ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೈಸ್ ರಸ್ತೆ - ಎಲೆಕ್ಟ್ರಾನಿಕ್ ಸಿಟಿ ಬಿಎಂಟಿಸಿ ಬಸ್‌ಗಳಿಗೆ ಚಾಲನೆ

Published 23 ಡಿಸೆಂಬರ್ 2023, 23:30 IST
Last Updated 23 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ಬೆಂಗಳೂರು ಹೊರವಲಯದ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಪ್ರಮುಖ ಸ್ಥಳಗಳಿಂದ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ವಿಪ್ರೊಗೇಟ್‌ಗೆ ಒಟ್ಟು 65 ಟ್ರಿಪ್‌ ಬಸ್ ಸಂಚರಿಸಲಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಮಾದಾವರ ಮೈದಾನದಲ್ಲಿ 7 ಮಾರ್ಗಗಳಲ್ಲಿ 40 ಬಸ್‌ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಚಿಕ್ಕಬಾಣಾವರದಿಂದ ನೂತನ ಬಸ್‌ಗಳನ್ನು ದಾಸರಹಳ್ಳಿ ಎಂಟನೇ ಮೈಲಿ, ಅಂದ್ರಹಳ್ಳಿ, ಹೇರೋಹಳ್ಳಿ ಕ್ರಾಸ್, ಸುಂಕದಕಟ್ಟೆ ಮಾರ್ಗವಾಗಿ ಸುಮನಹಳ್ಳಿ ಜಂಕ್ಷನ್‌ಗೆ 56 ಟ್ರಿಪ್‌ ಸಂಚರಿಸಲಿವೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9ರ ವರೆಗೆ ಪ್ರತಿ 10 ನಿಮಿಷಕ್ಕೊಮ್ಮೆ ಬಸ್ ಸೌಲಭ್ಯ ಇರಲಿದೆ ಎಂದು ವಿವರಿಸಿದರು.

ಮೆಟ್ರೊ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ವಿವಿಧ ಮೆಟ್ರೊ ನಿಲ್ದಾಣಗಳಿಂದ ಪ್ರಸ್ತುತ 38 ಮಾರ್ಗಗಳಲ್ಲಿ 141 ಅನುಸೂಚಿಗಳಿಂದ ಒಟ್ಟು 2,264 ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತದೆ. ಜಾಲಹಳ್ಳಿ ಮೆಟ್ರೊ ನಿಲ್ದಾಣ ಹಾಗೂ ದಾಸರಹಳ್ಳಿ ಮೆಟ್ರೊ ನಿಲ್ದಾಣಗಳಿಂದ ನಾಲ್ಕು ಮಾರ್ಗಗಳಲ್ಲಿ 104 ಟ್ರಿಪ್‌ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಶಾಸಕ ಎಸ್. ಮುನಿರಾಜು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ, ಬಿಎಂಟಿಸಿ ನಿರ್ದೇಶಕಿ ಕಲಾ ಕೃಷ್ಣಮೂರ್ತಿ, ನೈಸ್ ಸಂಸ್ಥೆ ಎಂ.ಡಿ. ಮೂರ್ತಿ, ಹೆಗಡೆ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT