ಸೋಮವಾರ, ಜನವರಿ 17, 2022
20 °C

ನೈಸ್ ರಸ್ತೆ: ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನೈಸ್ ರಸ್ತೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಈ ಬಗ್ಗೆ ನೈಸ್‌ ಎಂಟರ್‌ಪ್ರೈಸಸ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

'ನೈಸ್ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿದ್ದು, ನಿರ್ಲಕ್ಷ್ಯ ವಹಿಸುತ್ತಿರುವ ಆಡಳಿತ ಮಂಡಳಿ ವಿರುದ್ಧವೇ ಕಾನೂನು ಕ್ರಮ ಕೈಗೊಳ್ಳಿ’ ಎಂಬುದಾಗಿ ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್ ರವಿಕಾಂತೇಗೌಡ ಅವರು ಪೊಲೀಸರಿಗೆ ಸೂಚನೆ ನೀಡಿದ್ದರು. ನೈಸ್‌ ಆಡಳಿತ ಮಂಡಳಿಗೂ ಎಚ್ಚರಿಕೆ ರವಾನಿಸಿದ್ದರು.

ಇದರಿಂದ ಎಚ್ಚೆತ್ತ ಆಡಳಿತ ಮಂಡಳಿ, ಅಪಘಾತಗಳಿಗೆ ಕಾರಣ ಎನ್ನಲಾದ ದ್ವಿಚಕ್ರ ವಾಹನಗಳ ರಾತ್ರಿ ಸಂಚಾರಕ್ಕೆ ಜ. 16ರಿಂದ ನಿರ್ಬಂಧ ವಿಧಿಸಲು ಮುಂದಾಗಿದೆ.

‘ಜಂಟಿ ಕಮಿಷನರ್ ಅವರ ಸೂಚನೆಯಂತೆ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ರಾತ್ರಿ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ’ ಎಂದು ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು