ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಬ್ರುವರಿ 5ಕ್ಕೆ ಗಾಣಿಗ ಮಹಾಸಭಾದಿಂದ ಪ್ರತಿಭಟನೆ

Published 2 ಫೆಬ್ರುವರಿ 2024, 16:03 IST
Last Updated 2 ಫೆಬ್ರುವರಿ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ಗಾಣಿಗ ಅಭಿವೃದ್ಧಿ ನಿಗಮಕ್ಕೆ ಕಚೇರಿ ಹಾಗೂ ಅನುದಾನ ಒದಗಿಸುವಂತೆ ಆಗ್ರಹಿಸಿ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ ಇದೇ 5ರಂದು ಬೆಳಿಗ್ಗೆ 10.30ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. 

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಆನಂದ್ ಕೆ. ಮಂಡ್ಯ, ‘ರಾಜ್ಯದಲ್ಲಿ ಸಮಾರು 60 ಲಕ್ಷ ಮಂದಿ ಗಾಣಿಗ ಸಮುದಾಯದವರಿದ್ದು, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ನಮ್ಮ ಹೋರಾಟಕ್ಕೆ ಮಣಿದ ಹಿಂದಿನ ಬಿಜೆಪಿ ಸರ್ಕಾರ, 2023ರ ಫೆ.20ರಂದು ನಿಗಮ ಸ್ಥಾಪಿಸಿ ಆದೇಶ ಹೊರಡಿಸಿತ್ತು. ನಿಗಮದ ನೋಂದಣಿ ಸೇರಿ ವಿವಿಧ ಪ್ರಕ್ರಿಯೆಗಳು ನಡೆದಿಲ್ಲ. ಈ ಬಗ್ಗೆ ಕಾಂಗ್ರೆಸ್‌ ಸರ್ಕಾರ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಶಾಂತಿಯುತ ಪ್ರತಿಭಟನೆ ಕೈಗೊಂಡಿದ್ದೇವೆ’ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT