ಶನಿವಾರ, ಡಿಸೆಂಬರ್ 3, 2022
20 °C

ಜೈಲಿನಿಂದ ಹೊರಬಂದು ಡ್ರಗ್ಸ್ ಮಾರಾಟ: ನೈಜೀರಿಯಾ ಪ್ರಜೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆಯೊಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ₹ 20 ಲಕ್ಷ ಮೌಲ್ಯದ 230 ಗ್ರಾಂ ಎಂಡಿಎಂಎ ಜಪ್ತಿ ಮಾಡಿದ್ದಾರೆ.

‘ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ, ಆಫ್ರಿಕಾ ಪ್ರಜೆಗಳ ಜೊತೆ ಸೇರಿ ಡ್ರಗ್ಸ್ ಮಾರಲಾರಂಭಿಸಿದ್ದ. ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಈತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜಾಮೀನು ಮೇಲೆ ಹೊರಬಂದಿದ್ದ ಆರೋಪಿ ಪುನಃ ಡ್ರಗ್ಸ್ ಮಾರಲಾರಂಭಿಸಿದ್ದ’ ಎಂದು ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು