ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಅಕ್ರಮ ವಾಸ: ವಿದೇಶಿ ಪ್ರಜೆ ಬಂಧನ

Published 8 ಏಪ್ರಿಲ್ 2024, 15:32 IST
Last Updated 8 ಏಪ್ರಿಲ್ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ವೀಸಾ ಅವಧಿ ಮುಗಿದರೂ ನಗರದಲ್ಲಿ ಅಕ್ರಮವಾಗಿ ವಾಸವಿದ್ದ ಆರೋಪದಡಿ ವಿದೇಶಿ ಪ್ರಜೆ ಇಮ್ಯೂನಿಯಲ್ ಜಿಡೊಜಿನ್‌ (28) ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಲಾಗಿತ್ತು. ಇದೇ ಸಂದರ್ಭದಲ್ಲಿ ಹಲವರ ಮನೆಗಳಲ್ಲಿ ಪರಿಶೀಲಿಸಲಾಯಿತು. ನೈಜೀರಿಯಾದ ಜಿಡೊಜಿನ್ ಎಂಬಾತ ನಗರದಲ್ಲಿ ಅಕ್ರಮವಾಗಿ ವಾಸವಿದ್ದದ್ದು ತಿಳಿಯಿತು. ಈತನನ್ನು ಸೆರೆ ಹಿಡಿದು ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘2015ರಲ್ಲಿ ಪ್ರವಾಸಿ ವೀಸಾದಡಿ ನಗರಕ್ಕೆ ಬಂದಿದ್ದ ಆರೋಪಿ, ಬಾಣಸವಾಡಿಯ ಮನೆಯೊಂದರಲ್ಲಿ ನೆಲೆಸಿದ್ದ. 2019ರಲ್ಲಿ ಈತನ ವೀಸಾ ಅವಧಿ ಮುಗಿದಿತ್ತು. ಅಷ್ಟಾದರೂ ಈತ ತಮ್ಮ ದೇಶಕ್ಕೆ ವಾಪಸು ಹೋಗಿರಲಿಲ್ಲ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT