ಬುಧವಾರ, ಅಕ್ಟೋಬರ್ 28, 2020
29 °C

ನೈಜೀರಿಯಾದ ಮೂವರು ಪ್ರಜೆಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯ ಸದಾನಂದ ಪಾರ್ಕ್ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾದ ಮೂವರು ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

‘ಅಕರಿಕಾ ಆಂಟೊನಿ ಆಕಚುಕ್ವು (44), ಎಜೆಫೆಮ್ವಾ ಆಕಚುಕ್ವು (30) ಹಾಗೂ ಜೋಕ್ವು ಫ್ರಾನ್ಸಿಸ್ (32) ಬಂಧಿತರು. ಅವರಿಂದ 50 ಗ್ರಾಂ ಎಂಡಿಎಂಎ, 173 ಗ್ರಾಂ ಕೊಕೇನ್, 6 ಮೊಬೈಲ್, 2 ದ್ವಿಚಕ್ರ ವಾಹನ ಹಾಗೂ ₹ 55 ಸಾವಿರ ನಗದು ಜಪ್ತಿ ಮಾಡಲಾಗಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಶಿಕ್ಷಣ ಹಾಗೂ ವ್ಯಾಪಾರ ಕಾರಣ ನೀಡಿ ವಿಸಾ ಪಡೆದು ನಗರಕ್ಕೆ ಬಂದಿದ್ದ ಆರೋಪಿಗಳು, ಕೆ.ಆರ್.ಪುರದಲ್ಲಿ ನೆಲೆಸಿದ್ದರು. ವಿಸಾ ಅವಧಿ ಮುಗಿದರೂ ಮರಳದೇ, ನಗರದಲ್ಲಿ ಅಕ್ರಮವಾಗಿ ವಾಸವಿದ್ದರು. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾಫ್ಟ್‌ವೇರ್ ಕಂಪನಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದರು’ ಎಂದೂ ತಿಳಿಸಿದರು.

‘ಸೆ. 30ರಂದು ಮಧ್ಯಾಹ್ನ ಸದಾನಂದ ಉದ್ಯಾನ ಬಳಿ ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಆರೋಪಿಗಳು, ಡ್ರಗ್ಸ್ ಮಾರುತ್ತಿದ್ದರು. ಖಚಿತ ಮಾಹಿತಿ ಪಡೆದು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು