ಬೆಂಗಳೂರು: ಹೊರರಾಜ್ಯದಿಂದ ಮಾದಕ ವಸ್ತುಗಳನ್ನು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಡ್ರಗ್ಸ್ ಪೆಡ್ಲರ್ ಸ್ಟೆಫಿನ್ ಬ್ಲೆಸ್ಸಿಂಗ್ ನೋಸ್ಲಿ (35) ಅವರನ್ನು ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 35 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಬುರ್ಖಾ ಧರಿಸಿಕೊಂಡು ಅನುಮಾನಾಸ್ಪದವಾಗಿ ಮಹಿಳೆ ಓಡಾಟ ನಡೆಸುತ್ತಿದ್ದರು. ಭಾನುವಾರ ಸಂಜೆ ರಸ್ತೆಯಲ್ಲಿ ಆಟವಾಡುತ್ತಿದ್ದ ಮಕ್ಕಳು ಮಹಿಳೆಯನ್ನು ಗಮನಿಸಿದ್ದರು. ಬಳಿಕ ಪೋಷಕರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಪೋಷಕರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಕೊಡಿಗೇಹಳ್ಳಿ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಡ್ರಗ್ಸ್ ಪೆಡ್ಲರ್ ಎಂಬುದು ಗೊತ್ತಾಗಿದೆ.

‘ಆರೋಪಿ ಪರಾರಿಯಾಗುವ ಯತ್ನದಲ್ಲಿ ಎಂಡಿಎಂಎ ಕ್ರಿಸ್ಟಲ್ ಪೊಟ್ಟಣಗಳನ್ನು ಬಕೆಟ್ಗೆ ಎಸೆದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿಯಲ್ಲಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.