ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ವಾಸ: ನೈಜೀರಿಯಾ ಪ್ರಜೆಗೆ ಜೈಲು ಶಿಕ್ಷೆ

Published 17 ಫೆಬ್ರುವರಿ 2024, 15:17 IST
Last Updated 17 ಫೆಬ್ರುವರಿ 2024, 15:17 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಿದ್ದ ನೈಜೀರಿಯಾ ಪ್ರಜೆ ಇಫೆಂನಲ್ ಒಕೆಹುಕ್ವು ಮೈಕ್‌ಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಗರದ 56ನೇ ಸಿಸಿಎಚ್‌ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೊಡಿಗೇಹಳ್ಳಿ ಠಾಣೆಯಲ್ಲಿ 2022ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಸಿ.ಕೆ. ರಂಜಿತ್ ವಾದಿಸಿದ್ದರು.

‘ಇಫೆಂನಲ್‌, 2022ರ ಜೂನ್ 10ರಂದು ಕೊಡಿಗೇಹಳ್ಳಿ ಗೇಟ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಗಸ್ತಿನಲ್ಲಿದ್ದ ಸಿಬ್ಬಂದಿ ಈತನನ್ನು ವಿಚಾರಿಸಿದ್ದರು. ಆದರೆ, ಯಾವುದೇ ದಾಖಲೆ ತೋರಿಸಿರಲಿಲ್ಲ. ಅಕ್ರಮ ವಾಸ ಆರೋಪದಡಿ ಇಫೆಂನಲ್‌ನನ್ನು ಬಂಧಿಸಲಾಗಿತ್ತು. ತನಿಖೆ ನಡೆಸಿದ್ದ ಅಂದಿನ ಪಿಎಸ್‌ಐ ಪ್ರತಿಮಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು’.

‘ಎರಡು ವರ್ಷಗಳ ಶಿಕ್ಷೆ ಜೊತೆಯಲ್ಲೇ ಅಪರಾಧಿಗೆ ₹ 20 ಸಾವಿರ ದಂಡ ವಿಧಿಸಲಾಗಿದೆ. ಶಿಕ್ಷೆ ಅವಧಿ ಮುಗಿದ ನಂತರ ಇಫೆಂನಲ್‌ನನ್ನು ಗಡಿಪಾರು ಮಾಡುವಂತೆಯೂ ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ’ ಎಂದು ಸಿ.ಕೆ. ರಂಜಿತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT