ಬೆಂಗಳೂರು: ನಿಗ್ಲಿಸ್ ಅಡ್ವರ್ಟೈಸಿಂಗ್ ಸಂಸ್ಥೆಯು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ನಿಗ್ಲಿ ಕಿರುಚಿತ್ರ ಸ್ಪರ್ಧೆಯ ವಿಜೇತರಿಗೆ ಫೆ.28ರಂದು ಸಂಜೆ 4.30ಕ್ಕೆ ಸೇಂಟ್ ಜೋಸೆಫ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆವರಣದಲ್ಲಿಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಅತಿಥಿಗಳಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಕೆ.ರಾಕೇಶ್ ಕುಮಾರ್, ನಿರ್ದೇಶಕ ಗಿರೀಶ್ ಕಾಸರವಳ್ಳಿ, ಹಿರಿಯ ನಟ ಜೈಜಗದೀಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

‘ಪ್ರವಾಸೋದ್ಯಮ ಇಲಾಖೆಯ ಘೋಷವಾಕ್ಯವಾದ ‘ಒಂದು ರಾಜ್ಯ–ಹಲವು ಜಗತ್ತು’ ವಿಷಯದಡಿ ಕಾಲೇಜು ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲೇ ಕಿರುಚಿತ್ರ ತಯಾರಿಸಲು ಸ್ಪರ್ಧೆ ಆಯೋಜಿಸಲಾಗಿತ್ತು. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಕಾಲೇಜುಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ನಗದು ಬಹುಮಾನ, ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ಪ್ರದಾನ ಮಾಡಲಾಗುವುದು‘ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.