ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ನಗರದಲ್ಲಿ ಶನಿವಾರ ರಾತ್ರಿ ಜಾರಿ ಮಾಡಿದ್ದ ಕರ್ಫ್ಯೂ ವೇಳೆ 61 ವಾಹನಗಳನ್ನು ಆಗ್ನೇಯ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ.

’ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿತ್ತು. ಇದೇ ಸಂದರ್ಭದಲ್ಲಿ ಕೆಲವರು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುತ್ತಿದ್ದರು. ಅಂಥವರನ್ನು ತಡೆದು ವಾಹನ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘55 ದ್ವಿಚಕ್ರ ವಾಹನ, 5 ಕಾರುಗಳು ಹಾಗೂ ಆಟೊ ಜಪ್ತಿ ಮಾಡಲಾಗಿದೆ. ಮಾಲೀ
ಕರಿಗೆ ಎಚ್ಚರಿಕೆ ನೀಡಲಾಗಿದೆ’ ಎಂದರು.

ಏಪ್ರಿಲ್ 20ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ಪ್ರತಿಯೊಂದು ರಸ್ತೆಯಲ್ಲೂ ಬ್ಯಾರಿಕೇಡ್‌ಗಳನ್ನು ನಿಲ್ಲಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.