ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಟ್‌ ಕರ್ಫ್ಯೂ: ನಮ್ಮ ಮೆಟ್ರೊದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

Last Updated 27 ಡಿಸೆಂಬರ್ 2021, 12:10 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಹಾಗೂ ಓಮೈಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಜನವರಿ 28 ರಿಂದ ರಾತ್ರಿ ಕರ್ಫ್ಯೂ ವಿಧಿಸಿದೆ. ಈ ನಿಟ್ಟಿನಲ್ಲಿ 'ನಮ್ಮ ಮೆಟ್ರೊ' (ಬಿಎಂಆರ್‌ಸಿಎಲ್‌)ಪ್ರಯಾಣಿಕರಿಗೆ ಮಹತ್ವದ ಸೂಚನೆ ನೀಡಿದೆ.

ರಾತ್ರಿ ಕರ್ಫ್ಯೂ ಇರುವುದರಿಂದ ಜ.28 ರಿಂದ ರಾತ್ರಿ 10 ಗಂಟೆ ನಂತರ ಕಡಿಮೆ ರೈಲುಗಳು ಸಂಚರಿಸಲಿವೆ, ಸಂಪೂರ್ಣವಾಗಿ ಸೇವೆ ಸ್ಥಗಿತಗೊಳಿಸುವುದಿಲ್ಲ. ಅಲ್ಲದೇ ಈಗಿರುವ ಮೆಟ್ರೊದ ಪ್ರತಿದಿನದ ಆರಂಭ ಹಾಗೂ ಮುಕ್ತಾಯದ ಕಾರ್ಯಾಚರಣೆಯ ಸಮಯದಲ್ಲಿ ಬದಲಾವಣೆಯಾಗುವುದಿಲ್ಲ ಎಂದು ಬಿಎಂಆರ್‌ಸಿಎಲ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜನವರಿ 7ರವರೆಗೆ ರಾಜ್ಯ ಸರ್ಕಾರ ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಈ ವೇಳೆ ಅವಶ್ಯಕ ಪ್ರಯಾಣ ಹೊರತುಪಡಿಸಿ ಉಳಿದಂತೆ ಜನರ ಓಡಾಟವನ್ನು ನಿಷೇಧಿಸಲಾಗಿದೆ.

ಡಿಸೆಂಬರ್ 20ರಿಂದ ಮೆಟ್ರೊ ರೈಲುಗಳ ಸಂಚಾರ ಬೆಳಿಗ್ಗೆ 5 ಗಂಟೆಯಿಂದ ಆರಂಭಗೊಳ್ಳಲಿದೆ ಎಂದುಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿತ್ತು.

ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 5 ಗಂಟೆಯಿಂದಲೇಮೆಟ್ರೊ ರೈಲುಗಳು ಸಂಚರಿಸಲಿವೆ. ಭಾನುವಾರ ಮಾತ್ರ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೊ ಸೇವೆ ಇರಲಿದೆ.

ಹೊಸ ವೇಳಾಪಟ್ಟಿಯಿಂದನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ರೈಲುಗಳು ಬೆಳಿಗ್ಗೆ 5 ಗಂಟೆಯಿಂದ ಹೊರಡಲಿವೆ. ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲ ಆಗಲಿದೆ ಎನ್ನಲಾಗಿದೆ.

ಎಲ್ಲ ಟರ್ಮಿನಲ್‌ಗಳಿಂದ ರಾತ್ರಿ 11 ಗಂಟೆಗೆ ಹಾಗೂ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯ ರೈಲುಗಳು ಹೊರಡಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT